ಕರ್ನಾಟಕದ ರೈತರಿಗೆ ಪ್ರಧಾನಿ ಮೋದಿ ವಿಶೇಷ ಪ್ಯಾಕೇಜ್ ಘೋಷಿಸಬೇಕು – ಸುಮಲತಾ ಮನವಿ

Public TV
1 Min Read
Narendra Modi 2

– ಸಂಸತ್ತಿನಲ್ಲಿ ರೈತರ ಪರ ದನಿ ಎತ್ತಿದ ಮಂಡ್ಯ ಸಂಸದೆ

ನವದೆಹಲಿ: ಕರ್ನಾಟಕದಲ್ಲಿ ಈ ವರ್ಷ ಮಾನ್ಸೂನ್ ಕ್ಷೀಣಗೊಂಡಿದೆ. 60 ರಿಂದ 70% ಪ್ರಮಾಣದ ಬೆಳೆ ನಾಶವಾಗಿದೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕರ್ನಾಟಕದ ರೈತರ (Karnataka Farmers) ನೆರವಿಗೆ ಧಾವಿಸಬೇಕು. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮಂಡ್ಯ ಸಂಸದೆ ಸುಮಲತಾ ಮನವಿ ಮಾಡಿದ್ದಾರೆ.

FARMERS

ಲೋಕಸಭೆ ಕಲಾಪದಲ್ಲಿ ಶೂನ್ಯವೇಳೆಯಲ್ಲಿ ಬರ ಪರಿಸ್ಥಿತಿಯ ಬಗ್ಗೆ ಸಂಸದೆ ಸುಮಲತಾ (Sumalatha Ambareesh) ಪ್ರಸ್ತಾಪಿಸಿದರು. ಇದನ್ನೂ ಓದಿ: ರಾಜಸ್ಥಾನದಲ್ಲಿ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ – ಸಿಎಂ ಪಟ್ಟದ ಕುತೂಹಲಕ್ಕೆ ತೆರೆ ಸಾಧ್ಯತೆ

2023ರಲ್ಲಿ ಜಾಗತಿಕವಾಗಿ ಅತ್ಯಂತ ಹೆಚ್ಚು ಉಷ್ಣಾಂಶ ವರ್ಷವಾಗಿದೆ. ಆದ್ದರಿಂದಾಗಿ ನಮ್ಮ ರಾಜ್ಯದಲ್ಲಿಯೂ ಉಷ್ಣಾಂಶ ಹೆಚ್ಚಾಗಿದೆ. ಕರ್ನಾಟಕದಲ್ಲಿ ಈ ವರ್ಷ ಮಾನ್ಸೂನ್ ಕ್ಷೀಣಗೊಂಡಿದೆ. 236ರ ಪೈಕಿ ರಾಜ್ಯದ 223 ತಾಲೂಕುಗಳು ಬರ ಪೀಡಿತವಾಗಿದ್ದು, ಅಂದಾಜು 30 ಸಾವಿರ ಕೋಟಿ ನಷ್ಟವಾಗಿದೆ ಎಂದು ಪ್ರಧಾನಿಗಳ ಗಮನಕ್ಕೆ ತಂದರು.

ಮುಂದುವರಿದು, ನನ್ನ ಮತಕ್ಷೇತ್ರ ಮಂಡ್ಯದ ಎಲ್ಲಾ ತಾಲೂಕುಗಳು ಬರ ಪೀಡಿತವಾಗಿವೆ. ರೈತರು ಸಂಕಷ್ಟದಲ್ಲಿದ್ದಾರೆ, 60 ರಿಂದ 70% ಪ್ರಮಾಣದ ಬೆಳೆ ನಾಶವಾಗಿದೆ. ಕಬ್ಬು ಬೆಳೆಗಾರರಿಗೆ ಬೆಳೆ ವಿಮೆ ಲಭ್ಯವಾಗಿಲ್ಲ. ಕರ್ನಾಟದ ರೈತರ ನೆರವಿಗೆ ಪ್ರಧಾನಿ ಮೋದಿ ಧಾವಿಸಬೇಕು. ರೈತರ ನೆರವಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಸಲಿಂಗಕಾಮ, ವ್ಯಭಿಚಾರ ಸೇರಿಸುವ ಶಿಫಾರಸಿಗೆ ಕೇಂದ್ರ ಕ್ಯಾಬಿನೆಟ್‌ ಅಸಮ್ಮತಿ

Share This Article