ನವೆದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
Advertisement
ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಉತ್ತರ ಮತ್ತು ದಕ್ಷಿಣ ರಾಜ್ಯಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ. ಈ ನಡುವೆ ಹೊಸ ಸೇನಾ ನೇಮಕಾತಿಯ ನೀತಿಯನ್ನು ಯುವಕರು ತಿರಸ್ಕರಿಸುತ್ತಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಅಗ್ನಿಪಥ್ ಪ್ರತಿಭಟನೆಯ ಕಾವು- ಉತ್ತರದ ಬಳಿಕ ದಕ್ಷಿಣದಲ್ಲಿ ಹಿಂಸಾತ್ಮಕ ಪ್ರೊಟೆಸ್ಟ್
Advertisement
8 सालों से लगातार भाजपा सरकार ने ‘जय जवान, जय किसान’ के मूल्यों का अपमान किया है।
मैंने पहले भी कहा था कि प्रधानमंत्री जी को काले कृषि कानून वापस लेने पड़ेंगे।
ठीक उसी तरह उन्हें ‘माफ़ीवीर’ बनकर देश के युवाओं की बात माननी पड़ेगी और ‘अग्निपथ’ को वापस लेना ही पड़ेगा।
— Rahul Gandhi (@RahulGandhi) June 18, 2022
Advertisement
ಟ್ವೀಟ್‍ನಲ್ಲಿ ಏನಿದೆ?
ಸತತ 8 ವರ್ಷಗಳಿಂದ ಬಿಜೆಪಿ ಸರ್ಕಾರ ಜೈ ಜವಾನ್, ಜೈ ಕಿಸಾನ್ ಮೌಲ್ಯಗಳಿಗೆ ಅಪಮಾನ ಮಾಡಿದೆ. ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ಹಿಂಪಡೆಯಬೇಕು ಎಂದು ಈ ಹಿಂದೆ ಹೇಳಿದ್ದೆ. ಈಗಲೂ ಪ್ರಧಾನಿ ನರೇಂದ್ರ ಮೋದಿ ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು. ಅಗ್ನಿಪಥ್ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್ ಮಾದರಿಯ ʼಅಗ್ನಿಪಥ್ʼ- ಏನಿದು ಯೋಜನೆ, ಯಾಕಿಷ್ಟು ವಿರೋಧ?
Advertisement
‘ಅಗ್ನಿಪಥ್’ ಯೋಜನೆ ವಿರೋಧಿಸಿ ದೇಶಾದ್ಯಂತ ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾರ್ವಜನಿಕ ಹಾಗೂ ಸರ್ಕಾರದ ಆಸ್ತಿಗಳಿಗೆ ಅಪಾರ ಹಾನಿಯಾಗಿದೆ. ಹಲವೆಡೆ ಪ್ರತಿಭಟನಾಕಾರರನ್ನು ಬಂಧಿಸಲಾಗುತ್ತಿದೆ.