ಬೆಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ (Supreme Court) ಸಂವಿಧಾನದ ಆಶಯ ಎತ್ತಿಹಿಡಿದಿದೆ. ಇದರಿಂದ ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದ್ದು, ಇದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddarmaiah) ತಿಳಿಸಿದರು.
ಅವರಿಂದು ಲಾಲ್ ಬಾಗ್ ನಲ್ಲಿ ಫಲಪುಷ್ಟಪ ಪ್ರದರ್ಶನಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ (Rahul Gandhi) ಶಿಕ್ಷೆಯನ್ನ ವಿಧಿಸಿ ಸೂರತ್ ನ್ಯಾಯಾಲಯ ತೀರ್ಪು ನೀಡಿತ್ತು. ಆ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಮುಂದುವರೆಯುವ ರೀತಿಯಲ್ಲಿ ನ್ಯಾಯಾಲಯ ತೀರ್ಪು ನೀಡಿದೆ. ಈ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಈ ನೆಲದ ಕಾನೂನನ್ನ ಎಲ್ಲರೂ ಗೌರವಿಸಬೇಕು ಕಾನೂನನ್ನು ಎತ್ತಿಹಿಡಿಯುವ ಗೌರವಿಸುವ ಕೆಲಸವನ್ನ ಸುಪ್ರೀಂ ಕೋರ್ಟ್ ಮಾಡಿದೆ ಎಂದು ಶ್ಲಾಘಿಸಿದರು.
Advertisement
Advertisement
ಹಿನ್ನೆಲೆ ಏನು?
ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ʻಮೋದಿʼ ಎಂಬ ಉಪನಾಮ (Modi Surname Remark) ಏಕಿದೆ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್ ಅವರು ಎರಡು ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ.
Advertisement
ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್ – ಸೂರತ್ ನ್ಯಾಯಾಲಯ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ
Advertisement
ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಪಿ.ಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತು. ಇದನ್ನೂ ಓದಿ: ಏನೇ ಬಂದರೂ ನನ್ನ ಕರ್ತವ್ಯ ಹಾಗೆಯೇ ಇರಲಿದೆ: ಸುಪ್ರೀಂ ತೀರ್ಪಿಗೆ ರಾಗಾ ಪ್ರತಿಕ್ರಿಯೆ
Web Stories