ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಇಂದು ನಗರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಎಲ್ಲರನ್ನು ಬಿಟ್ಟು ಮೋದಿ ಅವರು ನೇರವಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಳಿ ಬಂದು ಅವರನ್ನು ಮಾತ್ರ ಹೆಚ್ಚಾಗಿ ಮಾತನಾಡಿಸಿದ್ದಾರೆ.
ವಿಶ್ವಯೋಗ ದಿನ ಹಿನ್ನೆಲೆ ಮೈಸೂರಿನಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಯಲಹಂಕ ವಿಮಾನಕ್ಕೆ ಮೂಲಕ ಬಂದಿಳಿದ ಮೋದಿ ಅವರನ್ನು ಥಾವರ್ ಚಂದ್ ಗೆಹ್ಲೋಟ್, ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬರಮಾಡಿಕೊಂಡರು. ಈ ವೇಳೆ ಎಲ್ಲರನ್ನು ಬಿಟ್ಟು ಯಡಿಯೂರಪ್ಪ ಕೈ ಹಿಡಿದು ಆರೋಗ್ಯವನ್ನು ವಿಚಾರಿಸುತ್ತಾ, ಬಹಳ ಆತ್ಮೀಯವಾಗಿ ಮಾತನಾಡಿಸಿದ್ದಾರೆ. ಇದನ್ನೂ ಓದಿ: ಬರೋಬ್ಬರಿ 11 ತಿಂಗಳ ಬಳಿಕ ಪ್ರಧಾನಿ ಭೇಟಿಯಾಗಲಿರುವ ಬಿಎಸ್‍ವೈ
ಈ ಮುನ್ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ದೆಹಲಿಗೆ ತೆರಳಿ ಯಡಿಯೂರಪ್ಪ ಅವರು ಪ್ರಧಾನಿಯನ್ನು ಭೇಟಿ ಮಾಡಿದ್ದರು. ಇದೀಗ 11 ತಿಂಗಳ ನಂತರ ಮೋದಿ ಅವರೊಂದಿಗೆ ಯಡಿಯೂರಪ್ಪ ಅವರು ಮಾತನಾಡಿದ್ದಾರೆ. ಅಲ್ಲದೇ ಫ್ಲೈಟ್‍ನಿಂದ ಇಳಿಯುತ್ತಿದ್ದಂತೆಯೇ ಮೋದಿ ಅವರಿಗೆ ಸಿಎಂ ಬೊಮ್ಮಾಯಿ ಪುಸ್ತಕವನ್ನು ಗಿಫ್ಟ್ ನೀಡಿದ್ದಾರೆ. ಇದನ್ನೂ ಓದಿ: ಇಂದಿನಿಂದ 2 ದಿನ ಪ್ರಧಾನಿ ರಾಜ್ಯ ಪ್ರವಾಸ – 20 ಗಂಟೆಯಲ್ಲಿ 10 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ