ಬೆಂಗಳೂರು: ಶುಕ್ರವಾರ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮನ ಹಿನ್ನೆಲೆ ಸಾರ್ವಜನಿಕರ ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಆಗಲಿದೆ.
ಪ್ರಧಾನಿ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 6ಗಂಟೆಯವರೆಗೆ ಸಂಚಾರ ಮಾರ್ಗದ ಹಲವೆಡೆ ನಿರ್ಬಂಧ ಹೇರಲಾಗಿದೆ. ಗೊಲ್ಲರಹಳ್ಳಿ ಗೇಟ್-ಹುಣಸೂರು ಗ್ರಾಮ (ಕೆಐಎಡಿಬಿ ಕೈಗಾರಿಕ ಪ್ರದೇಶ), ಡಾಬಾ ಗೇಟ್‌ನಿಂದ (ಎನ್‌ಹೆಚ್ 648) ವಿಮಾನ ನಿಲ್ದಾಣದ ಕಡೆಗೆ, ಹೆಣ್ಣೂರು ಬಾಗಲೂರು ಮುಖ್ಯರಸ್ತೆಯಿಂದ ವಿಮಾನ ನಿಲ್ದಾಣದ ಕಡೆಗೆ, ಚಿಕ್ಕಜಾಲ ಕೋಟೆ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣದವರೆಗೆ ಬೆಳಗ್ಗೆ 8ರಿಂದ ಸಂಜೆ 6ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ನೀಡಿದ್ದ SC ಒಳಮೀಸಲಾತಿಯನ್ನ ಪುನರ್ ಪರಿಶೀಲನೆ ಮಾಡ್ತೀವಿ: ಪರಮೇಶ್ವರ್
Advertisement
Advertisement
ಇನ್ನು ಕೆಂಪೇಗೌಡ ವಿಮಾನ ನಿಲ್ದಾಣ ಹಾಗೂ ಕೆಐಎಡಿಬಿ ಕೈಗಾರಿಕಾ ಪ್ರದೇಶಕ್ಕೆ ತೆರಳುವ ವಾಹನಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಶುಕ್ರವಾರ ಬೆಳಗ್ಗೆ 9:35ಕ್ಕೆ ದೆಹಲಿಯಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಲಿದ್ದಾರೆ. 9:40 ಕ್ಕೆ ಕಲಬುರಗಿಯಿಂದ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 12:10ಕ್ಕೆ ಹೆಲಿಕಾಪ್ಟರ್ ಮೂಲಕ ಸೊಲ್ಲಾಪುರದಿಂದ ನಿರ್ಗಮಿಸಿ, ಮಧ್ಯಾಹ್ನ 1 ಗಂಟೆಗೆ ಕಲಬುರಗಿ ಏರ್‌ಪೋರ್ಟ್‌ಗೆ ಆಗಮಿಸಲಿದ್ದಾರೆ. ಇದನ್ನೂ ಓದಿ: ಭಾರತ ಚುನಾವಣಾ ಆಯೋಗದಿಂದ ಕರ್ನಾಟಕಕ್ಕೆ ಎರಡು ಪ್ರತಿಷ್ಠಿತ ಪ್ರಶಸ್ತಿ ಘೋಷಣೆ
Advertisement
Advertisement
1:05 ಕ್ಕೆ ವಿಶೇಷ ವಿಮಾನದ ಮೂಲಕ ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 2:10 ಕ್ಕೆ ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸಲಿದ್ದಾರೆ. 2:15 ಕ್ಕೆ ಕೆಐಎಎಲ್ ನಿಂದ ರಸ್ತೆ ಮಾರ್ಗವಾಗಿ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಗೆ ಪ್ರಯಾಣ ಮಾಡಲಿದ್ದಾರೆ. 2:45 ಕ್ಕೆ ಭಟ್ಟರಮಾರನಹಳ್ಳಿಗೆ ತಲುಪಲಿದ್ದಾರೆ. ಬಿಐಇಟಿಸಿ ಉದ್ಘಾಟನೆ ಮತ್ತು ಬೋಯಿಂಗ್ ಸುಕನ್ಯಾ ಕಾರ್ಯಕ್ರಮ ಲೋಕಾರ್ಪಣೆ ಮಾಡಲಿದ್ದಾರೆ. ಇದನ್ನೂ ಓದಿ: ಬೆಂಗಳೂರು| ಬೆಸ್ಕಾಂ ವ್ಯಾಪ್ತಿಯ ಕೆಲವೆಡೆ ಇಂದು ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ?