ಬೆಂಗಳೂರು: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಗುಡ್ನ್ಯೂಸ್ ಸಿಕ್ಕಿದೆ. ಪಿಂಕ್ ಲೈನ್ (Pink Line) ಮೆಟ್ರೋ ಇದೇ ನವೆಂಬರ್ನಲ್ಲಿ ಲೋಕಾರ್ಪಣೆಯಾಗಲಿದ್ದು, ಇದಕ್ಕಾಗಿ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ನಮ್ಮ ಮೆಟ್ರೋ ಉದ್ಘಾಟಿಸಿದ್ದ ಮೋದಿ ಇದೀಗ ಗುಲಾಬಿ ಮಾರ್ಗದ ಲೋಕಾರ್ಪಣೆಗೂ ಬೆಂಗಳೂರಿಗೆ ಬರ್ತಿದ್ದಾರೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋದಲ್ಲಿ ಯುವತಿಯ ವಿಡಿಯೋ ಮಾಡಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಾಮುಕ – ದೂರು ದಾಖಲು
ಈ ಬಗ್ಗೆ ಮೆಟ್ರೋ ಪಿಆರ್ಒ ಯಶವಂತ್ ಚೌವ್ಹಾಣ್ ಮಾತನಾಡಿ, ಬಿಎಂಆರ್ಸಿಎಲ್ನಿಂದ ಪಿಂಕ್ ಲೈನ್ ಉದ್ಘಾಟನೆಗೆ ಯಾವುದೇ ಅಡೆತಡೆ ಇಲ್ಲ ಎಂದು ಹೇಳಿದ್ದಾರೆ.
ಪಿಂಕ್ ಲೈನ್ನ ಎಲಿವೇಟೆಡ್ ಮಾರ್ಗದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ನಿಲ್ದಾಣಗಳು ಕಾರ್ಯಾಚರಣೆಗೆ ಸಜ್ಜಾಗಿವೆ. ಪಿಂಕ್ ಲೈನ್ ಆರಂಭವಾದರೆ ನಗರದ ದಕ್ಷಿಣ ಮತ್ತು ಉತ್ತರ ಭಾಗಗಳ ನಡುವಿನ ಪ್ರಯಾಣ ಮತ್ತಷ್ಟು ಸುಲಭವಾಗಲಿದೆ. ಇದನ್ನೂ ಓದಿ: ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ; ತುಟ್ಟಿಭತ್ಯೆ ಶೇ.3ರಷ್ಟು ಹೆಚ್ಚಳಕ್ಕೆ ಸಂಪುಟ ಅಸ್ತು
