ವಿರೋಧ ಪಕ್ಷಗಳ ನಾಯಕ, ನಾಯಕಿಯರಲ್ಲಿ ಮೋದಿ ವಿಶೇಷ ಮನವಿ

Public TV
2 Min Read
NarendraModi

ನವದೆಹಲಿ: 2019ರ ಲೋಕಸಭೆ ಚುನಾವಣೆ ಹತ್ತಿರದಲ್ಲಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯದ ಸಿಎಂಗಳು, ನಟ-ನಟಿಯರು, ಕ್ರೀಡಾಪಟುಗಳಲ್ಲಿ ಮರೆಯದೆ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಟ್ವಿಟ್ಟರ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕ ಸಿಎಂ ಎಚ್.ಡಿ ಕುಮಾರಸ್ವಾಮಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶದ ಮಾಜಿ ಸಿಎಂ ಮಾಯಾವತಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಶರದ್ ಪವಾರ್ ಸೇರಿದಂತೆ ಅನೇಕ ಪ್ರತಿಪಕ್ಷ ನಾಯಕರಲ್ಲಿ ಈ ಬಾರಿ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದ ಮತದಾನ ನಡೆಯಬೇಕು. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಕೇವಲ ರಾಜಕೀಯ ಗಣ್ಯರು ಮಾತ್ರವಲ್ಲದೆ ಸಿನಿಮಾ ತಾರೆಯರು, ಕ್ರೀಡಾಪಟುಗಳು ಸೇರಿದಂತೆ ಇತರೇ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರಿಗೂ ತಪ್ಪದೆ ಮತದಾನ ಮಾಡಿ ಹಾಗೂ ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಎಂದು ಕರೆಕೊಟ್ಟಿದ್ದಾರೆ.

ಟ್ವೀಟ್‍ಗಳಲ್ಲಿ ಏನಿದೆ?

ಮುಂಬರುವ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರು ಮತ ಚಲಾಯಿಸುವಂತೆ ಅವರ ಗಮನ ಸೆಳೆಯುವುದರ ಬಗ್ಗೆ ಗಮನಹರಿಸೋಣ. ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಭಾರತವನ್ನು ಬಲಪಡಿಸೋಣ ಎಂದು ಬರೆದು, ಕರ್ನಾಟಕ ಸಿಎಂ ಕುಮಾರಸ್ವಾಮಿ, ಒಡಿಶಾ ಸಿಎಂ ನವೀನ್ ಪಟ್ನಾಯಕ್, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹಾಗೂ ವೈಎಸ್‍ಆರ್ ಕಾಂಗ್ರೆಸ್ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮೂಲಕ ಮೋದಿ ಕರೆ ನೀಡಿದ್ದಾರೆ.

ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಮಾಯಾವತಿ, ಅಖಿಲೇಶ್ ಯಾದವ್, ಸೇರಿದಂತೆ ಇನ್ನೂ ಅನೇಕ ಪ್ರತಿಪಕ್ಷ ನಾಯರನ್ನು ಟ್ಯಾಗ್ ಮಾಡಿ ಲೋಕಸಭೆ ಚುನಾವಣೆಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸೋಣ. ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾದರೆ ನಮ್ಮ ಪ್ರಜಾಪ್ರಭುತ್ವಕ್ಕೆ ಒಳ್ಳೆಯದು ಎಂದು ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.

ಸಿನಿಮಾ ತಾರೆಯರಾದ ದೀಪಿಕಾ ಪಡುಕೋಣೆ, ರಣ್‍ವೀರ್ ಸಿಂಗ್, ನಾಗಾರ್ಜುನ್, ಮೋಹನ್‍ಲಾಲ್, ಆಲಿಯಾ ಭಟ್, ಶಾರೂಖ್ ಖಾನ್, ಸಲ್ಮಾನ್ ಖಾನ್ ಸೇರಿದಂತೆ ಹಲವು ಮಂದಿಗೆ ಟ್ವೀಟ್ ಮಾಡಿ ಮತದಾನವನ್ನು ತಪ್ಪದೇ ಮಾಡಿ, ಮತದಾನದ ಬಗ್ಗೆ ಜಾಗೃತಿ ಮೂಡಿಸಿ. “ಅಪನಾ ಟೈಮ್ ಆ ಗಯಾ ಹೇ, ಹೈ ಜೋಶ್‍ನಿಂದ ಮತದಾರರನ್ನು ಮತ ಕೇಂದ್ರಗಳತ್ತ ಬರುವಂತೆ ಮಾಡಬೇಕು ಎಂದು ಮೋದಿ ಸಿನಿಮಾ ಶೈಲಿಯಲ್ಲೇ ಕರೆ ಕೊಟ್ಟಿದ್ದಾರೆ.

ಜೊತೆಗೆ ಭಾರತದ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಿದ ಹೆಮ್ಮೆಯ ಕ್ರೀಡಾಪಟುಗಳಾದ ಭಜರಂಗ್ ಪುನಿಯಾ, ಗೀತಾ ಪೋಗಟ್, ಬಬಿತಾ ಪೋಗಟ್ ಸೇರಿದಂತೆ ಇನ್ನೂ ಹಲವು ಸಾಧಕರಿಗೆ ಟ್ವೀಟ್ ಮಾಡಿ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿ. ನೀವು ಯುವ ಪೀಳಿಗೆಗೆ ಸ್ಪೂರ್ತಿ ಎಂದಿದ್ದಾರೆ.

ಅಷ್ಟೇ ಅಲ್ಲದೆ ಟೀಂ ಇಂಡಿಯಾ ಕ್ರಿಕೆಟ್ ಆಟಗಾರರಾದ ಎಂ.ಎಸ್ ಧೋನಿ, ವಿರಾಟ್ ಕೋಹ್ಲಿ. ಮಾಝಿ ಕ್ರಿಕೆಟಿಗರಾದ ವಿರೇಂದ್ರ ಸೆಹ್ವಾಗ್, ಅನಿಲ್ ಕುಂಬ್ಳೆ ಸೇರಿದಂತೆ ಅನೇಕರಿಗೆ ಟ್ವೀಟ್ ಮಾಡಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *