ನವದೆಹಲಿ: ಕನ್ನಡ ನಾಡಿನ ಹೆಮ್ಮೆ ಒನಕೆ ಓಬವ್ವನನ್ನು ಪ್ರಧಾನಿ ನರೇಂದ್ರ ಮೋದಿ ನೆನೆದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.
Advertisement
ಮೋದಿ ಟ್ವಿಟ್ಟರ್ ನಲ್ಲಿ, ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕøತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೋಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ಎಂದು ಕನ್ನಡದಲ್ಲಿ ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಜನವರಿ ಅಂತ್ಯಕ್ಕೆ ಬೊಮ್ಮಾಯಿ ಅಧಿಕಾರ ಹೋಗುತ್ತೆ: ಶಿವರಾಜ್ ತಂಗಡಗಿ
Advertisement
ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ.
— Narendra Modi (@narendramodi) November 11, 2021
Advertisement
ಇತ್ತೀಚೆಗೆ ಮೋದಿ ಅವರು ಕನ್ನಡದಲ್ಲಿಯೇ ರಾಜ್ಯೋತ್ಸವಕ್ಕೆ ಶುಭಕೋರಿದ್ದು, ಕನ್ನಡಿಗರು ಸಂತೋಷಪಟ್ಟಿದ್ದರು. ಇತ್ತ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಟ್ವಿಟ್ಟರ್ ನಲ್ಲಿ, ನಾಡಿನ ಸಮಸ್ತ ಜನತೆಗೆ ಚಿತ್ರದುರ್ಗದ ವೀರವನಿತೆ ಒನಕೆ ಓಬವ್ವ ಜಯಂತಿಯ ಹಾರ್ದಿಕ ಶುಭಕಾಮನೆಗಳು. ಓಬವ್ವನವರ ಶೌರ್ಯ, ಮಾತೃಭೂಮಿಯ ಮೇಲಿನ ಭಕ್ತಿ ಅನನ್ಯವಾದದ್ದು, ಅವರ, ಧೈರ್ಯ, ಸಾಹಸ ನಮಗೆ ಸ್ಪೂರ್ತಿ ನೀಡುತ್ತದೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.
Advertisement
“ನಾಡಿನ ಸಮಸ್ತ ಜನತೆಗೆ ಚಿತ್ರದುರ್ಗದ ವೀರವನಿತೆ ಒನಕೆ ಓಬವ್ವ ಜಯಂತಿಯ ಹಾರ್ದಿಕ ಶುಭಕಾಮನೆಗಳು. ಓಬವ್ವನವರ ಶೌರ್ಯ, ಮಾತೃಭೂಮಿಯ ಮೇಲಿನ ಭಕ್ತಿ ಅನನ್ಯವಾದದ್ದು, ಅವರ ಧೈರ್ಯ, ಸಾಹಸ ನಮಗೆ ಸ್ಪೂರ್ತಿ ನೀಡುತ್ತದೆ.#ಒನಕೆಓಬವ್ವ pic.twitter.com/m0FlbZpsER
— Basavaraj S Bommai (@BSBommai) November 11, 2021
ಒನಕೆ ಓಬವ್ವ ಜನ್ಮ ದಿನವಾದ ನವೆಂಬರ್ 11ರಂದು ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿಯನ್ನಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಕನ್ನಡ ಮತ್ತ ಸಂಸ್ಕøತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ವೆಂಕಟೇಶಪ್ಪ ನಡಾವಳಿಗಳನ್ನು ಹೊರಡಿಸಿದ್ದು, ಒನಕೆ ಓಬವ್ವ ಹೆಸರು, ಚಿತ್ರದುರ್ಗ ಇತಿಹಾಸದಲ್ಲಿ ಮರೆಯಲಾಗದು. ಅವರನ್ನು ಕರ್ನಾಟಕ ವೀರ ವನಿತೆಯರಾದ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕರ ಸಾಲಿನಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಇದನ್ನೂ ಓದಿ: ಶ್ರೀಕಿಗೂ, ನನ್ನ ಮಗನಿಗೂ ಯಾವುದೇ ರೀತಿಯ ಸಂಬಂಧವಿಲ್ಲ: ರುದ್ರಪ್ಪ ಲಮಾಣಿ
ಒನಕೆ ಓಬವ್ವ 18ನೇ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮುದ್ದಹನುಮಪ್ಪನ ಹೆಂಡತಿ. ಚಿತ್ರದುರ್ಗದ ಮೇಲೆ ಹೈದರಾಲಿ ಸೈನಿಕರು ಹಠತ್ತಾಗಿ ಆಕ್ರಮಣ ಮಾಡಿದಾಗ ಓಬವ್ವ ತನ್ನ ಒನಕೆಯನ್ನು ಅಸ್ತ್ರವನ್ನಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿದ್ದರು. ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ತನ್ನ ಒನಕೆಯಿಂದಲೇ ಕೊಂದರು. ಕೊನೆಯಲ್ಲಿ ಎದುರಾಳಿಯು ಬೆನ್ನಹಿಂದೆ ಬಂದದ್ದನ್ನು ಗಮನಿಸಲಾಗದೇ ಶುತ್ರುವಿನ ಕತ್ತಿಗೆ ಬಲಿಯಾದರು. ಅಂದಿನಿಂದ ಅವರು ಒನಕೆ ಓಬವ್ವ ಎಂದು ಪ್ರಸಿದ್ಧಿ ಹೊಂದಿದ್ದಾರೆ.