ನವದೆಹಲಿ: ಸತತ 2ನೇ ಬಾರಿಗೆ ದೇಶದ ಪ್ರಧಾನಮಂತ್ರಿಯಾದ ನರೇಂದ್ರ ಮೋದಿ ಶನಿವಾರ ತಮ್ಮ ಮೊದಲ ವಿದೇಶ ಪ್ರವಾಸ ಆರಂಭಿಸಲಿದ್ದಾರೆ.
2ನೇ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ವಿದೇಶಿ ಪ್ರವಾಸ ಕೈಗೊಳ್ಳುತ್ತಿದ್ದು, ದ್ವೀಪ ರಾಷ್ಟ್ರ ಮಾಲ್ಡೀವ್ಸ್ ಗೆ ಮೊದಲು ಭೇಟಿ ನೀಡಲಿದ್ದಾರೆ. ಆ ಬಳಿಕ ಚರ್ಚ್ ಮೇಲಿನ ಉಗ್ರರ ದಾಳಿಗೆ ನಲುಗಿದ ಶ್ರೀಲಂಕಾಗೆ ಮೋದಿ ಭಾನುವಾರ ಭೇಟಿ ನೀಡಲಿದ್ದಾರೆ. ತಮ್ಮ ವಿದೇಶಿ ಪ್ರವಾಸ ಬಗ್ಗೆ ಮಾತನಾಡಿರುವ ಮೋದಿ ಅವರು ಈ ಭೇಟಿಯಿಂದ ನೆರೆ ರಾಷ್ಟ್ರಗಳೊಂದಿಗೆ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಹೇಳಿದ್ದಾರೆ.
Advertisement
Advertisement
ವಿದೇಶಿ ಪ್ರವಾಸಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಕೇರಳದ ಗುರುವಾಯೂರು ದೇಗುಲಕ್ಕೆ ಭೇಟಿ ನೀಡಲಿದ್ದಾರೆ. ಇತ್ತ ಭಾನುವಾರ ಬೆಳಗ್ಗೆ ಶ್ರೀಲಂಕಾಗೆ ತೆರಳಿರುವ ಮೋದಿ ಅವರು ಸಂಜೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ.
Advertisement
ಮೇ 30ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ಮೋದಿ ಅವರು ಅಂದು ಬಿಮ್ ಸ್ಟೆಕ್ ರಾಷ್ಟ್ರಗಳಿಗೆ ಆಹ್ವಾನ ನೀಡಿದ್ದರು. ಈ ಬಿಮ್ಸ್ ಸ್ಟೆಕ್ಸ್ ದೇಶಗಳಲ್ಲಿ ಮಾಲ್ಡೀವ್ಸ್ ಇಲ್ಲದ ಕಾರಣ ಮೋದಿ ಮೊದಲ ಪ್ರವಾಸ ಕೈಗೊಂಡಿದ್ದಾರೆ ಎನ್ನಲಾಗಿದೆ. ಉಳಿದಂತೆ ಮೇ 30 ರಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಸೇನಾ ಮೋದಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.