ಭುವನೇಶ್ವರ: ಇಂದು ಸಂಜೆ 7:15ಕ್ಕೆ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ (Narendra Modi) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ಮರಳು ಕಲಾವಿದ ಸುದರ್ಶನ್ ಪಾಟ್ನಾಯಕ್ (Sudarshan Pattnaik) ಪುರಿಯ ಬೀಚ್‌ನಲ್ಲಿ (Puri Beach) ಮರಳಿನಿಂದ ಮೋದಿ ಕಲಾಕೃತಿ ರಚಿಸಿ ವಿಶೇಷ ರೀತಿಯಲ್ಲಿ ಶುಭಕೋರಿದ್ದಾರೆ.
ಪುರಿ ಕಡಲತೀರದಲ್ಲಿ ರಚಿಸಲಾದ ಮರಳಿನ ಈ ಕಲಾಕೃತಿಯಲ್ಲಿ ‘ಅಭಿನಂದನ್ ಮೋದಿ ಜಿ 3.0’ ಎಂದು ಬರೆದಿದ್ದು, ನರೇಂದ್ರ ಮೋದಿಯವರ ಫೋಟೋವನ್ನು ಒಳಗೊಂಡಿದೆ. ಇನ್ನು ಈ ಕಲಾಕೃತಿಯ ಕೆಳಗೆ ‘ವಿಕಸಿತ ಭಾರತ’ ಎಂದು ಬರೆದು ಸುದರ್ಶನ್ ಮೋದಿಯವರಿಗೆ ಶುಭಹಾರೈಸಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆ, ಜೋಶಿ, ಶೋಭಾ, ಸೋಮಣ್ಣಗೆ ಮಂತ್ರಿ ಸ್ಥಾನ ಫಿಕ್ಸ್
Advertisement
Advertisement
ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿಮಂಡಲದ ಸದಸ್ಯರು ಇಂದು ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ಜವಾಹರಲಾಲ್ ನೆಹರೂ ಬಳಿಕ ಸತತ 3ನೇ ಬಾರಿಗೆ ಪ್ರಧಾನಿ ಹುದ್ದೆ ಅಲಂಕರಿಸಿದ ಪ್ರಧಾನಿ ಎಂಬ ಕೀರ್ತಿಗೆ ನರೇಂದ್ರ ಮೋದಿ ಭಾಜನರಾಗಲಿದ್ದಾರೆ. ಇದನ್ನೂ ಓದಿ: ಒಂದೇ ರನ್‌ವೇಯಲ್ಲಿ ಲ್ಯಾಂಡಿಂಗ್, ಟೇಕಾಫ್- ಮುಂಬೈಯಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿತು ದುರಂತ
Advertisement
Advertisement
ಮೋದಿ ನೇತೃತ್ವದಲ್ಲಿ ಎನ್‌ಡಿಎ ಒಕ್ಕೂಟ ಕೇಂದ್ರದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲು ಸಜ್ಜಾಗಿದೆ. ಪ್ರಮಾಣವಚನ ಸಮಾರಂಭಕ್ಕೆ ರಾಜ್ಯ, ದೇಶ ಹಾಗೂ ವಿದೇಶಿ ಗಣ್ಯರೂ ಸೇರಿದಂತೆ ಸುಮಾರು 9 ಸಾವಿರ ಗಣ್ಯರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನಕ್ಕೆ 3 ಹಂತಗಳಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಇದನ್ನೂ ಓದಿ: ಮೋದಿ 3.0 ಯುಗಾರಂಭಕ್ಕೆ ಕ್ಷಣಗಣನೆ – ರಾಷ್ಟ್ರಪತಿ ಭವನಕ್ಕೆ ಮೂರು ಹಂತದ ಭದ್ರತೆ!