ಮಾಲೆ: ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೂ ನರೇಂದ್ರ ಮೋದಿ (Narendra Modi) ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಾಲ್ಡೀವ್ಸ್ (Maldives) ಅಧ್ಯಕ್ಷ ಮೊಹಮ್ಮದ್ ಮುಯಿಝು (Mohamed Muizzu) ಅವರನ್ನು ಆಹ್ವಾನಿಸಲಾಗಿದೆ.
ಭಾರತ ಸರ್ಕಾರದ ಮಂತ್ರಿಗಳ ಪರಿಷತ್ ನೀಡಿದ ಆಹ್ವಾನವನ್ನು ಸ್ವೀಕರಿಸಲಾಗಿದೆ ಎಂದು ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿ ಪ್ರಕಟಣೆ ಮೂಲಕ ತಿಳಿಸಿದೆ. ಭಾರತದ ಹೈಯರ್ ಕಮಿಷನರ್ ಮುನು ಮಹಾವರ್ ಅವರು ಮಾಲ್ಡೀವ್ಸ್ ಅಧ್ಯಕ್ಷರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಿದ್ದಾರೆ. ಇದನ್ನೂ ಓದಿ: ನಾವು ಶಿಸ್ತುಬದ್ಧವಾಗಿ, ಒಗ್ಗಟ್ಟಿನಿಂದ ಇರಬೇಕು- CWC ಸಭೆಯಲ್ಲಿ ಖರ್ಗೆ ಮಾತು
ಆಹ್ವಾನ ನೀಡಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಿದ ಅಧ್ಯಕ್ಷ ಮುಯಿಝು, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಹಾಜರಾಗಿ ಮೋದಿ ಅವರಿಗೆ ಗೌರವ ನೀಡಲಾಗುವುದು ಎಂದು ಪ್ರತಿಕ್ರಿಯಿಸಿದ್ದಾರೆ.
ಭಾರತದೊಂದಿಗಿನ ನಿಕಟ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಪ್ರಧಾನ ಮಂತ್ರಿಯೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ. ಮಾಲ್ಡೀವ್ಸ್-ಭಾರತದ ಸಂಬಂಧಗಳು ಸಕಾರಾತ್ಮಕ ದಿಕ್ಕಿನಲ್ಲಿ ಸಾಗುತ್ತಿವೆ ಎಂದು ಈ ಭೇಟಿಯಿಂದ ಸಾಬೀತಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಪ್ರಮಾಣವಚನಕ್ಕೆ ವಿದೇಶಿ ಗಣ್ಯರು, ಪೌರಕಾರ್ಮಿಕರು- ಕಾರ್ಯಕ್ರಮಕ್ಕೆ ಯಾರಿಗೆಲ್ಲ ಆಹ್ವಾನ?
ಆಮಂತ್ರಣವನ್ನು ಖುದ್ದಾಗಿ ತಲುಪಿಸಿದ್ದಕ್ಕಾಗಿ ಮಾಲ್ಡೀವ್ಸ್ ಅಧ್ಯಕ್ಷರು, ಹೈಕಮಿಷನರ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸಂಸತ್ತಿನ ಚುನಾವಣೆಯಲ್ಲಿ ವಿಜಯಶಾಲಿಯಾಗುವುದರೊಂದಿಗೆ ಪಿಎಂ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಲು ಸಿದ್ಧರಾಗಿದ್ದಾರೆ.
ಪ್ರಧಾನಿ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಮಾಲ್ಡೀವ್ಸ್ ಮತ್ತು ಭಾರತದ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ತಲೆದೋರಿತು. ಮಾಲ್ಡೀವ್ಸ್‌ನಲ್ಲಿ ಬೀಡುಬಿಟ್ಟಿದ್ದ ಭಾರತೀಯ ಸೇನೆ ದೇಶಕ್ಕೆ ಮರಳುವಂತಾಯಿತು. ಉಭಯ ದೇಶಗಳ ಸಂಬಂಧ ಹದಗೆಟ್ಟಾಗಿನಿಂದ ಮಾಲ್ಡೀವ್ಸ್ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ದ್ವೀಪ ರಾಷ್ಟ್ರಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದವರಲ್ಲಿ ಭಾರತೀಯರೇ ಹೆಚ್ಚಿದ್ದರು. ಇದು ಆ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಿತು. ಇದನ್ನೂ ಓದಿ: ಜೂ.9ರ ಸಂಜೆ 7:15 ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ