ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅವರು ಭಾರತದಿಂದ ಹೊರಗೆ ಹೋಗುವ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದು ಬಿಜೆಪಿ. ಪ್ರಧಾನಿ ಮೋದಿ, ಬಿಜೆಪಿ, ಅಮಿತ್ ಶಾ ಹಾಗೂ ಯಡಿಯೂರಪ್ಪ ಅವರೇ ಪ್ಲ್ಯಾನ್ ಮಾಡಿ ವಿದೇಶಕ್ಕೆ ಕಳುಹಿಸಿದ್ದರು ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹಾರಿಸ್ ನಲಪಾಡ್ (Mohammed Haris Nalapad) ಆರೋಪಿಸಿದ್ದಾರೆ.
#WATCH | Bengaluru, Karnataka: Youth Congress president Mohammed Haris Nalapad says, “The program of Prajwal Revanna to go outside India is sponsored by BJP. On the day of the 26th of May after polling, he was sent immediately with a diplomatic passport outside…The BJP,… pic.twitter.com/1kj3l2qiAf
— ANI (@ANI) May 30, 2024
Advertisement
ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್ ಆದ ಬಗ್ಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ನಲಪಾಡ್, ಪ್ರಜ್ವಲ್ ರೇವಣ್ಣ ಅವರು ಭಾರತದಿಂದ ಹೊರಗೆ ಹೋಗುವ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದು ಬಿಜೆಪಿ (BJP) ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್: ಇದುವರೆಗೆ ಏನಾಯ್ತು? – ಇಲ್ಲಿದೆ ಪಿನ್ ಟು ಪಿನ್ ಡಿಟೇಲ್ಸ್….
Advertisement
Advertisement
ಏಪ್ರಿಲ್ 26ರಂದು ಕರ್ನಾಟದಲ್ಲಿ ಮೊದಲ ಹಂತದ ಚುನಾವಣೆ ಮುಗಿಯುತ್ತಿದ್ದಂತೆ ರಾಜತಾಂತ್ರಿಕ ಪಾಸ್‌ಪೋರ್ಟ್‌ನೊಂದಿಗೆ ಅವರನ್ನು ವಿದೇಶಕ್ಕೆ ಕಳುಹಿಸಲಾಗಿದೆ. ಇದು ಬಿಜೆಪಿಯ ಪ್ರಾಯೋಜಿತ ಕಾರ್ಯಕ್ರಮ. ಇದೀಗ 7ನೇ ಹಂತದ ಮತದಾನ ನಡೆಯಬೇಕಿರುವ ಸಂದರ್ಭದಲ್ಲಿ ವಿದೇಶದಿಂದ ಕರೆಸಿದ್ದಾರೆ. ಬಿಜೆಪಿ, ನರೇಂದ್ರ ಮೋದಿ ಜೀ (PM Modi Ji), ಅಮಿತ್ ಶಾ ಮತ್ತು ನಮ್ಮ ಯಡಿಯೂರಪ್ಪ ಜಿ ಎಲ್ಲರೂ ಒಟ್ಟಾರೆ ಪ್ಲ್ಯಾನ್ ಮಾಡಿ ಹೊರಗೆ ಕಳುಹಿಸಿದ್ದರು. ನೀವೇ ಯೋಚನೆ ಮಾಡಿ ಯಾರಾದರೂ ಕುಟುಂಬಸ್ಥರಿಗೂ ಹೇಳದೇ ಮನೆ ಬಿಟ್ಟು ಹೋಗ್ತಾರಾ ಎಂದು ಪ್ರಶ್ನೆ ಮಾಡಿದ್ದಾರೆ.
Advertisement
ಇದೇ ವೇಳೆ ನಾನೂ ಈಗಷ್ಟೇ ದೆಹಲಿಯಿಂದ ಬರ್ತಿದ್ದೇನೆ ಅಂತಾ ಬೋರ್ಡಿಂಗ್ ಪಾಸ್ ತೋರಿಸಿದ ನಳಪಾಡ್, ನಾನು ದೆಹಲಿಯಿಂದ ಬರುತ್ತಿರುವಾಗಲೇ ಆಕಸ್ಮಿಕವಾಗಿ ಪ್ರಜ್ವಲ್ ಸಹ ಬರ್ತಿದ್ದಾನೆ ಅಂತ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಅರೆಸ್ಟ್ ಬಳಿಕ SIT ಕಚೇರಿಗೆ ಪ್ರಜ್ವಲ್ ರೇವಣ್ಣ; ಏರ್‌ಪೋರ್ಟ್‌ನಲ್ಲಿ ಏನೆಲ್ಲಾ ಬೆಳವಣಿಗೆ ಆಯ್ತು? – ಮುಂದೇನು ಕ್ರಮ?
ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರು ಕೊನೆಗೂ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನ ಡಿಎಲ್‌ಎಚ್ 764 ಎ 359 ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಪ್ರಕ್ರಿಯೆ ಮುಗಿದ ಬಳಿಕ ಎಸ್‌ಐಟಿ ಅಧಿಕಾರಿಗಳು ಬಂಧಿಸಿ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್!