ಮೈಸೂರು: ನಿರುದ್ಯೋಗ ಇರುವ ಕಾರಣ ಯುವಕರು ತಪ್ಪು ದಾರಿ ಹಿಡಿದಿದ್ದಾರೆ. ಇದಕ್ಕೆಲ್ಲ ಬಿಜೆಪಿಯೇ (BJP) ಹೊಣೆಗಾರರು ಎಂದು ಕೆಪಿಸಿಸಿ ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ (Mohammed Haris Nalapad) ಹೇಳಿದರು.
ಶಿವಮೊಗ್ಗದಲ್ಲಿ (Shivamogga) ಐಸಿಸ್ ಸಂಪರ್ಕದಲ್ಲಿದ್ದ ಯುವಕರ ಬಂಧನ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಗ್ರಿ ಪಡೆದ ಯುವಕರಿಗೆ ಕೆಲಸ ಸಿಗುತ್ತಿಲ್ಲ. ಹೀಗಾಗಿ ಅವರು ಕ್ರೈಂ ದಾರಿ ಹಿಡಿಯುತ್ತಿದ್ದಾರೆ. ತಪ್ಪಾದ ದಾರಿಯಲ್ಲಿ ಹೋಗುತ್ತಿದ್ದಾರೆ. ಇದೇ ರಾಜ್ಯದಲ್ಲಿ ನಡೆಯುತ್ತಿರುವುದು. ಐಸಿಸ್ ಸಂಘಟನೆ ಅಂತಲ್ಲ. ಯುವಕರು ತಪ್ಪಾದ ದಾರಿ ಹಿಡಿಯುತ್ತಿರುವುದು ಸತ್ಯ. ನಿರುದ್ಯೋಗ ಇರುವ ಕಾರಣ ಯುವಕರು ತಪ್ಪು ದಾರಿ ಹಿಡಿದಿದ್ದಾರೆ. ಇದಕ್ಕೆ ಬಿಜೆಪಿಯೇ ಹೊಣೆಗಾರರಾಗಿದ್ದಾರೆ. ಕೆಲಸ ಇದ್ದರೆ ಯುವಕರಿಗೆ ತಪ್ಪು ದಾರಿಗೆ ತುಳಿಯುವ ಯೋಚನೆ ಬರಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
Advertisement
Advertisement
2023ರ ವರೆಗೆ ಯುವಕರು ತಾಳ್ಮೆಯಿಂದ ಇರಿ. ಸುವರ್ಣ ಕಾಲ ಬರುತ್ತೆ. ತಪ್ಪು ದಾರಿಗೆ ಹೋಗಬೇಡಿ. ಐಸಿಸ್ ಸಂಪರ್ಕದಲ್ಲಿ ಇರುವವರನ್ನು ಭಾರತದಲ್ಲಿ ಇಟ್ಟುಕೊಳ್ಳಬೇಡಿ. ಅವರಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಗಂಜಿ ಗಿರಾಕಿಗಳಿಂದ ದೂರವಿರಿ – ಬಿಜೆಪಿಯಿಂದ ರಿಡೂ ಸಿದ್ದರಾಮಯ್ಯ, ಇಡಿ ಡಿಕೆಶಿ ಅಭಿಯಾನ
Advertisement
Advertisement
ಬೆಂಗಳೂರಿನಲ್ಲಿ ಒತ್ತುವರಿ ತೆರವಿಗೆ ಕಾಂಗ್ರೆಸ್ (Congress) ವಿರೋಧವಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‍ಗೂ ಒತ್ತುವರಿ ತೆರವಿಗೂ ಸಂಬಂಧವಿಲ್ಲ. ಬಿಜೆಪಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ. ಒತ್ತುವರಿ ತೆರವು ಮಾಡುವ ಮುನ್ನಾ ವೈಜ್ಞಾನಿಕವಾಗಿ ವರದಿ ತಯಾರಿಸಿ. ವೈಜ್ಞಾನಿಕವಾಗಿ ವರದಿ ತಯಾರು ಮಾಡದೆ ಸಿಕ್ಕ ಸಿಕ್ಕವರ ಮನೆ ಹೊಡೆದರೆ ಹೇಗೆ ಹೇಳಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಪಟಾಕಿ ಬ್ಲಾಸ್ಟ್ ನೆಪದಲ್ಲಿ ಸ್ಫೋಟಕ ಸ್ಫೋಟ – ಇದು ಶಿವಮೊಗ್ಗ ಶಂಕಿತ ಉಗ್ರನ ಟ್ರಯಲ್ ಬ್ಲ್ಯಾಸ್ಟ್ ಕಥೆ
ಭಾರತ್ ಜೋಡೋ ಯಾತ್ರೆ ಸಂಘಟನೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರಲ್ಲೆ ಅಸಮಾಧಾನ ವಿಚಾರದ ಬಗ್ಗೆ ಮಾತನಾಡಿದ ಅವರು, ಪಕ್ಷ ಅಂದ ಮೇಲೆ ಅದು ಮನೆ ಇದ್ದಂತೆ. ಎಲ್ಲಾ ರೀತಿಯ ಮಾತು ಬರುತ್ತವೆ. ನಾವೇ ಮನೆಯೊಳಗೆ ಕೂತು ಮಾತಾಡಿಕೊಂಡು ಸರಿ ಮಾಡಿಕೊಳ್ಳುತ್ತೇವೆ. ಯಾತ್ರೆಯ ಸಂಘಟನೆ ವಿಚಾರದಲ್ಲಿ ಯಾರು ತಾರತಮ್ಯ ಮಾಡಬಾರದು ಎಂದು ತಿಳಿಸಿದರು.