ಮುಂಬೈ: ಟಿ20 ವಿಶ್ವಕಪ್ನಿಂದ (T20 World Cup) ಗಾಯಾಳುವಾಗಿ ಹೊರಗುಳಿದ ಜಸ್ಪ್ರೀತ್ ಬುಮ್ರಾ (Jasprit Bumrah) ಸ್ಥಾನಕ್ಕೆ ಮೊಹಮ್ಮದ್ ಶಮಿಯನ್ನು (Mohammed Shami) ಬಿಸಿಸಿಐ (BCCI) ಆಯ್ಕೆ ಮಾಡಿದ್ದು, 15 ಸದಸ್ಯರ ತಂಡದಲ್ಲಿ ಶಮಿ ಸ್ಥಾನ ಪಡೆದಿರುವ ಬಗ್ಗೆ ಬಿಸಿಸಿಐ ಮೂಲಗಳಿಂದ ವರದಿಯಾಗಿದೆ.
Advertisement
ಬುಮ್ರಾ ಗಾಯಾಳುವಾಗಿ ತಂಡದಿಂದ ಹೊರಗುಳಿದ ಬಳಿಕ ಅವರ ಸ್ಥಾನಕ್ಕೆ ಬಿಸಿಸಿಐ ಬದಲಿ ಆಟಗಾರನನ್ನು ಇನ್ನೂ ಆಯ್ಕೆ ಮಾಡಿಲ್ಲ. ಮೂಲಗಳ ಪ್ರಕಾರ ಶಮಿಯನ್ನು ಆಯ್ಕೆ ಮಾಡಲಾಗಿದ್ದು, ನಾಳೆ ಆಸ್ಟ್ರೇಲಿಯಾಗೆ (Australia) ತೆರಳಲಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಬಿಸಿಸಿಐ ಅಧಿಕೃತವಾಗಿ ತಿಳಿಸಿಲ್ಲ. ಇದನ್ನೂ ಓದಿ: ಗಂಗೂಲಿ ಬಿಜೆಪಿ ಸೇರಲು ನಿರಾಕರಿಸಿದ್ದರಿಂದ್ಲೇ 2ನೇ ಬಾರಿಗೆ BCCI ಸ್ಥಾನ ಕೈತಪ್ಪಿದೆ – TMC
Advertisement
Advertisement
ಈ ನಡುವೆ ಮೀಸಲು ಆಟಗಾರನಾಗಿ ಸ್ಥಾನ ಪಡೆದಿದ್ದ ದೀಪಕ್ ಚಹರ್ (Deepak Chahar) ಗಾಯಗೊಂಡು ಟಿ20 ವಿಶ್ವಕಪ್ನಿಂದ ಹೊರಬಿದ್ದಿದ್ದಾರೆ. ಈ ಹಿಂದೆ ಬುಮ್ರಾ ಬದಲಿಗೆ ಚಹರ್ಗೆ ಅವಕಾಶ ಸಿಗುವ ನಿರೀಕ್ಷೆ ಇತ್ತು. ಆದರೆ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಗಾಯಗೊಂಡ ಪರಿಣಾಮ ಚಹರ್ ಟಿ20 ವಿಶ್ವಕಪ್ನಿಂದ ಹೊರಬಿದ್ದಿದ್ದಾರೆ.
Advertisement
ಶಮಿ ಜೊತೆಗೆ ಮೀಸಲು ಆಟಗಾರರಾಗಿ ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಆಯ್ಕೆಯಾಗಿದ್ದು, ನಾಳೆ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಭಾರತ ಅಕ್ಟೋಬರ್ 23 ರಂದು ಪಾಕಿಸ್ತಾನ ವಿರುದ್ಧ ಆಡಲಿದೆ. ಇದನ್ನೂ ಓದಿ: ನೀನು SSLC ಪಾಸ್ ಆಗಲ್ಲ ಅಂತ ಅಪ್ಪ ಹೇಳಿದ್ರು- ಧೋನಿ ಸ್ಕೂಲ್ ಲೈಫ್ ರಿವೀಲ್
ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
Live Tv
[brid partner=56869869 player=32851 video=960834 autoplay=true]