– ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಬೆನ್ನಲ್ಲೇ ಚರ್ಚೆ ಜೋರು
ನವದೆಹಲಿ: ಟೀಂ ಇಂಡಿಯಾ ಸ್ಟಾರ್ ವೇಗಿ ಮೊಹಮ್ಮದ್ ಶಮಿ (Mohammed Shami) ತಮ್ಮ ರಾಜಕೀಯ ಇನ್ನಿಂಗ್ಸ್ ಶುರು ಮಾಡೋಕೆ ರೆಡಿಯಾದ್ರಾ ಅನ್ನೋ ಚರ್ಚೆ ಜೋರಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಅವರನ್ನು ಭೇಟಿಯಾದ ಬೆನ್ನಲ್ಲೇ ಶಮಿ ಅವರ ರಾಜಕೀಯ ಎಂಟ್ರಿ ಚರ್ಚೆ ಭಾರೀ ಸದ್ದು ಮಾಡುತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಕುನ್ವರ್ ಬಸಿತ್ ಅಲಿ ಕೂಡ ಇದ್ದರು. ಆದ್ರೆ ಶಮಿ ಬಿಜೆಪಿ (BJP) ಸೇರ್ಪಡೆ ಬಗ್ಗೆ ಯಾವುದೇ ಅಧಿಕೃತ ಪೋಸ್ಟ್ ಹಂಚಿಕೊಂಡಿಲ್ಲ, ಹೇಳಿಕೆಯನ್ನೂ ನೀಡಿಲ್ಲ.
ಬಿಜೆಪಿ ಸೇರಿದ ಚಾಹಲ್
ಇತ್ತೀಚೆಗಷ್ಟೇ ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಬಿಜೆಪಿ ಸೇರ್ಪಡೆಯಾದರು. ಪಕ್ಷದ ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿಗೆ ವಿಶೇಷ ಆಹ್ವಾನಿತರಾಗಿ ನೇಮಕಗೊಂಡಿದ್ದಾರೆ. ಪಕ್ಷದೊಳಗೆ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ಬಿಜೆಪಿ ಹೈಕಮಾಂಡ್ಗೆ ಚಾಹಲ್ ಕೃತಜ್ಞತೆ ಸಲ್ಲಿಸಿದ್ದಾರೆ. ಇದಾದ 1 ವಾರದಲ್ಲೇ ಈ ಬೆಳವಣಿಗೆ ನಡೆದಿದೆ.
ಟೆಸ್ಟ್ ಕ್ರಿಕೆಟ್ಗೆ ಶಮಿ ಗುಡ್ಬೈ
ಟೀಂ ಇಂಡಿಯಾದ ಸ್ಟಾರ್ ವೇಗಿ ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. 36 ವರ್ಷದ ಶಮಿ 2013ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಮೂಲಕ ಅಂತಾರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಶಮಿ 64 ಟೆಸ್ಟ್ಗಳನ್ನ ಆಡಿದ್ದು, 229 ವಿಕೆಟ್ಗಳನ್ನ ಗಳಿಸಿದ್ದಾರೆ. 6 ಬಾರಿ 5 ವಿಕೆಟ್ ಗೊಂಚಲು ಪಡೆದ ದಾಖಲೆಯನ್ನು ಹೆಗಲಿಗೇರಿಸಿಕೊಂಡಿದ್ದಾರೆ.

