ಮುಂಬೈ: ಏಕದಿನ ವಿಶ್ವಕಪ್ ಕ್ರಿಕೆಟ್‌ನಲ್ಲಿ (World Cup Cricket) ಅತ್ಯುತ್ತಮ ಪ್ರದರ್ಶನ ತೋರಿದ ಮೊಹಮ್ಮದ್ ಶಮಿ (Mohammed Shami) ಅವರ ಹೆಸರನ್ನು ಬಿಸಿಸಿಐ (BCCI) ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ (Arjuna Award) ಶಿಫಾರಸು ಮಾಡಿದೆ.
ಈ ಬಾರಿಯ ವಿಶ್ವಕಪ್‌ನಲ್ಲಿ ಶಮಿ ಕೇವಲ 7 ಪಂದ್ಯವಾಡಿ 24 ವಿಕೆಟ್ ಪಡೆಯುವ ಮೂಲಕ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. 3 ಬಾರಿ ಶಮಿ 5 ವಿಕೆಟ್‌ಗಳ ಗೊಂಚಲು ಪಡೆದಿದ್ದಾರೆ. ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್ ಪಡೆದು ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದರು.
- Advertisement
ವಿಶ್ವಕಪ್ ಟೂರ್ನಿಯ ನಂತರ ವಿಶ್ರಾಂತಿ ಪಡೆದಿರುವ ಅನುಭವಿ ವೇಗಿ ದಕ್ಷಿಣ ಆಫ್ರಿಕಾ (South Africa) ವಿರುದ್ಧ ನಡೆಯಲಿರುವ 2 ಪಂದ್ಯಗಳ ಟೆಸ್ಟ್ ಸರಣಿ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್ ಬ್ಯಾಕ್ ಮಾಡಲಿದ್ದಾರೆ. ಇದನ್ನೂ ಓದಿ: ಅಪ್ಪಿಕೊಂಡು ಸಮಾಧಾನ ಹೇಳಿದ ಮೋದಿ – ಮತ್ತೆ ನಾವು ಪುಟಿದೇಳುತ್ತೇವೆ ಎಂದ ಶಮಿ
- Advertisement
ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಮೊಹಮ್ಮದ್ ಶಮಿ ಅವರ ಗ್ರಾಮದಲ್ಲೇ ಸಣ್ಣ ಕ್ರೀಡಾಂಗಣ (Mini Stadium) ನಿರ್ಮಾಣಕ್ಕೆ ಉತ್ತರ ಪ್ರದೇಶ ಸರ್ಕಾರ (Uttar Pradesh) ಮುಂದಾಗಿದೆ.
ಉತ್ತರ ಪ್ರದೇಶದ ಅಮ್ರೋಹಾ (Amroha) ಜಿಲ್ಲೆಯ ಸಹಾಸ್ಪುರ ಗ್ರಾಮದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದ್ದು, ಈಗಾಗಲೇ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ಕ್ರೀಡಾಂಗಣದ ಕಾಮಗಾರಿ ಆರಂಭಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದಾರೆ.
ಸರ್ಕಾರದಿಂದ ಘೋಷಣೆ ಹೊರ ಬಿದ್ದ ಬೆನ್ನಲ್ಲೇ ಉತ್ತರ ಪ್ರದೇಶದ ರಾಷ್ಟ್ರೀಯ ಲೋಕದಳ ಪಕ್ಷದ ರಾಜ್ಯಸಭಾ ಸದಸ್ಯ ಜಯಂತ್ ಸಿಂಗ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಶಮಿ ತವರಿನಲ್ಲಿ ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಸಹಾಯ ಮಾಡಲು ನನ್ನ ಸಂಸದರ ನಿಧಿಯನ್ನು ನೀಡಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ.