ದುಬೈ: ಐಸಿಸಿ (ICC) ಅಂತರಾಷ್ಟ್ರೀಯ ಏಕದಿನ (ODI) ಬೌಲರ್ಗಳ ಶ್ರೇಯಾಂಕ ಪಟ್ಟಿಯಲ್ಲಿ ವೇಗಿ ಮೊಹಮ್ಮದ್ ಸಿರಾಜ್ (Mohammed Siraj) ಅಗ್ರ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.
ಭಾರತದಲ್ಲಿ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಆಡದ ಆಸ್ಟ್ರೇಲಿಯಾದ ವೇಗಿ ಜೋಶ್ ಹ್ಯಾಝಲ್ವುಡ್ ಬೌಲಿಂಗ್ ರ್ಯಾಂಕಿಂಗ್ ಮೊದಲ ಸ್ಥಾನವನ್ನು ಮರಳಿ ಪಡೆದಿದ್ದಾರೆ. ನ್ಯೂಜಿಲೆಂಡ್ ಎಡಗೈ ಬೌಲರ್ ಟ್ರೆಂಟ್ ಬೌಲ್ಟ್ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಮತ್ತೊಬ್ಬ ವೇಗಿ ಮಿಚೆಲ್ ಸ್ಟಾರ್ಕ್ ಸಿರಾಜ್ ಜೊತೆ ಮೂರನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: WPL 2023: ಡೆಲ್ಲಿ ಕ್ಯಾಪಿಟಲ್ಸ್ಗೆ 5 ವಿಕೆಟ್ಗಳ ಜಯ – ಫೈನಲ್ಗೆ ಗ್ರ್ಯಾಂಡ್ ಎಂಟ್ರಿ
Advertisement
Advertisement
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ವಿಶಾಖಪಟ್ಟಣದಲ್ಲಿ (Visakhapatnam) ನಡೆದ 2ನೇ ಪಂದ್ಯದಲ್ಲಿ ಮಿಚೆಲ್ ಮಾರ್ಷ್ ಹಾಗೂ ಟ್ರಾವಿಸ್ ಹೆಡ್ ಅವರು ಸ್ಫೋಟಕ ಬ್ಯಾಟಿಂಗ್ ಮಾಡಿದ್ದರು. ಈ ಪಂದ್ಯದಲ್ಲಿ 3 ಓವರ್ ಎಸೆದ ಸಿರಾಜ್ 37 ರನ್ ನೀಡಿದ ಪರಿಣಾಮ ಸಿರಾಜ್ ಮೊದಲ ಸ್ಥಾನದಿಂದ ಜಾರಿದ್ದಾರೆ.
Advertisement
Advertisement
ಸಿರಾಜ್ ಕಳೆದ ಹತ್ತು ತಿಂಗಳಿಂದ ಏಕದಿನ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಇದೇ ಜನವರಿಯಲ್ಲಿ ನಡೆದಿದ್ದ ಏಕದಿನ ಪಂದ್ಯದಲ್ಲಿ ಸಿರಾಜ್ ವಿಶ್ವದ ನಂ.1 ಬೌಲರ್ ಪಟ್ಟಕ್ಕೇರಿದ್ದರು. ಇದನ್ನೂ ಓದಿ: ಬೆಂಗಳೂರು ಸೇರಿದಂತೆ 12 ಸ್ಥಳಗಳಲ್ಲಿ ವಿಶ್ವಕಪ್ ಟೂರ್ನಿ – ಮೋದಿ ಸ್ಟೇಡಿಯಂನಲ್ಲಿ ಫೈನಲ್