ನವದೆಹಲಿ: ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ಜಾಮೀನು ಅರ್ಜಿಯನ್ನು ಪಟಿಯಾಲ ಹೈಕೋರ್ಟ್ ಶನಿವಾರ ನಿರಾಕರಿಸಿದೆ ಹಾಗೂ 14 ದಿನಗಳ ನ್ಯಾಯಾಂಗ ಬಂಧನವನ್ನು ನೀಡಿದೆ.
2018ರಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಹಿನ್ನೆಲೆ ಜುಬೇರ್ ಅವರನ್ನು ಕಳೆದ ವಾರ ಪೊಲೀಸರು ಬಂಧಿಸಿದ್ದರು. ಬಂಧನದ ಬಳಿಕ ಅವರ ಟ್ವಿಟ್ಟರ್ ಖಾತೆಯಲ್ಲಿ ಹೆಚ್ಚಾಗಿ ಪಾಕಿಸ್ತಾನದ ಹಾಗೂ ಮಧ್ಯಪ್ರಾಚ್ಯ ರಾಷ್ಟ್ರಗಳ ಖಾತೆಗಳಿಂದ ಬೆಂಬಲ ವ್ಯಕ್ತವಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬಿಜೆಪಿ ನಾಯಕರೊಂದಿಗೆ ಟೈಲರ್ ಹಂತಕರಿರೋ ಫೋಟೋ ವೈರಲ್ – BJPಗೂ ಹಂತಕರಿಗೂ ಇದ್ಯಾ ನಂಟು?
Advertisement
Advertisement
ಮೊಹಮ್ಮದ್ ಜುಬೇರ್ ಬಂಧನದ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಪೋಸ್ಟ್‌ಗಳು ಹಾಗೂ ಹ್ಯಾಶ್‌ಟ್ಯಾಗ್‌ಗಳು ಹರಿದಾಡಿವೆ. ದೆಹಲಿ ಪೊಲೀಸರ ಪ್ರಕಾರ ಜುಬೇರ್ ಅವರಿಗೆ ಬೆಂಬಲಿಸಿ ಟ್ವೀಟ್ ಮಾಡುತ್ತಿರುವ ಹೆಚ್ಚಿನ ಬಳಕೆದಾರರು ಪಾಕಿಸ್ತಾನ, ಯುಎಇ, ಕುವೈತ್‌ಗಳಂತಹ ಮಧ್ಯಪ್ರಾಚ್ಯ ದೇಶದವರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಣಿಪುರದಲ್ಲಿ ಭೂಕುಸಿತ – 3 ದಿನಗಳಿಂದ 24 ಸಾವು, 38 ಜನ ನಾಪತ್ತೆ
Advertisement
ಮೊಹಮ್ಮದ್ ಜುಬೇರ್ ಅವರ 4 ದಿನಗಳ ಬಂಧನ ಶನಿವಾರ ಕೊನೆಗೊಂಡ ಬಳಿಕ ದೆಹಲಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಕೋರಿದ್ದಾರೆ. ಪ್ರಕರಣದಲ್ಲಿ ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಎಫ್‌ಐಆರ್‌ನಲ್ಲಿ ಅದಕ್ಕೆ ಸಂಬಂಧಿಸಿದ ಸೆಕ್ಷನ್‌ಗಳನ್ನು ಸೇರಿಸಿದ್ದಾರೆ.