ಭುವನೇಶ್ವರ: ಒಡಿಶಾದ ಮೊದಲ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ (Mohan Charan Majhi) ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಈ ವೇಳೆ ಉಪಸ್ಥಿತರಿದ್ದರು.
ಒಡಿಶಾದ (Odisha) ಭುವನೇಶ್ವರದ ಜನತಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಮಾಝಿ ಜೊತೆಗೆ ಕನಕ್ ವರ್ಧನ್ ಸಿಂಗ್ ದೇವ್ ಮತ್ತು ಪ್ರವತಿ ಪರಿದಾ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದನ್ನೂ ಓದಿ: ಪೆಮಾ ಖಂಡು ಸತತ 3ನೇ ಅವಧಿಗೆ ಅರುಣಾಚಲ ಪ್ರದೇಶ ಸಿಎಂ
Advertisement
Advertisement
ಒಡಿಶಾದ ರಾಜ್ಯಪಾಲ ರಘುಬರ್ ದಾಸ್ ಅವರು ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿ ಹಾಗೂ ಸಂಪುಟದ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. 24 ವರ್ಷಗಳ ಕಾಲ ಒಡಿಶಾ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಬಿಜು ಜನತಾ ದಳ (ಬಿಜೆಡಿ) ನಾಯಕ ನವೀನ್ ಪಟ್ನಾಯಕ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು.
Advertisement
ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಶ್ವಿನಿ ವೈಷ್ಣವ್ ಮತ್ತು ನಿತಿನ್ ಗಡ್ಕರಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಕುವೈತ್ ಅಗ್ನಿ ದುರಂತದಲ್ಲಿ 40 ಮಂದಿ ಭಾರತೀಯರ ದುರ್ಮರಣ – ಮೋದಿ ಸಂತಾಪ
Advertisement
ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಪಕ್ಷ ಬಿಜೆಡಿ ಹೀನಾಯ ಸೋಲನುಭವಿಸಿತು. ಚುನಾವಣೆಯಲ್ಲಿ ಬಹುಮತ ದಾಖಲಿಸಿದ ಬಿಜೆಪಿ (BJP) ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸಿದೆ. ಆ ಮೂಲಕ 24 ವರ್ಷಗಳ ಬಿಜೆಡಿ ಆಡಳಿತಕ್ಕೆ ಬ್ರೇಕ್ ಬಿದ್ದಿದೆ.