ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ (Madhya Pradesh CM) ಸ್ಥಾನಕ್ಕೆ ಉಜ್ಜಯಿನಿ ದಕ್ಷಿಣ ಕ್ಷೇತ್ರದ ಶಾಸಕ ಮೋಹನ್ ಯಾದವ್ (Mohan Yadav) ಅವರನ್ನು ಆಯ್ಕೆ ಮಾಡಲಾಗಿದೆ.
ಸೋಮವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಈ ನಿರ್ಧಾರ ಪ್ರಕಟಿಸಲಾಗಿದೆ. ಜಗದೀಶ್ ದೇವಾಡ, ರಾಜೇಶ್ ಶುಕ್ಲಾ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದ್ದು, ವಿಧಾನಸಭೆಯ ಸ್ಪೀಕರ್ (Assembly Speaker) ಸ್ಥಾನಕ್ಕೆ ನರೇಂದ್ರ ತೋಮರ್ ಅವರನ್ನು ಆಯ್ಕೆ ಮಾಡಲಾಗಿದೆ. ಅಚ್ಚರಿಯ ಆಯ್ಕೆ ಮೂಲಕ 18 ವರ್ಷಗಳ ಸುಧೀರ್ಘ ಕಾಲ ಮುಖ್ಯಮಂತ್ರಿಯಾಗಿದ್ದ ಶಿವರಾಜ್ ಸಿಂಗ್ ಚೌಹನ್‌ಗೆ ಅವರಿಗೆ ಹೈಕಮಾಂಡ್ ವಿಶ್ರಾಂತಿ ನೀಡಿದೆ.
Advertisement
Advertisement
2013ರಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದ ಮೋಹನ್ ಯಾದವ್ 2018ರಲ್ಲಿ ಮರು ಆಯ್ಕೆಯಾಗಿದ್ದರು. 2020ರಿಂದ ಹಾಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ನೇತೃತ್ವದ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
Advertisement
1965ರ ಮಾರ್ಚ್ 25 ರಂದು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಜನಿಸಿದ ಮೋಹನ್ ಯಾದವ್ ಹಲವು ವರ್ಷಗಳಿಂದ ಬಿಜೆಪಿಯೊಂದಿಗೆ ಒಡನಾಟದಲ್ಲಿದ್ದರು. ರಾಜಕೀಯ ಪ್ರಯತ್ನಗಳ ಜೊತೆಗೆ, ಅವರು ಉದ್ಯಮಿಯೂ ಆಗಿದ್ದಾರೆ. 2013, 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಮೋಹನ್ ಯಾದವ್ 2023ರ ಮಧ್ಯಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚೇತನ್ ಪ್ರೇಮನಾರಾಯಣ್ ಯಾದವ್ ವಿರುದ್ಧ 12,941 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಈ ಮೂಲಕ ಸತತ ಹಾಟ್ರಿಕ್ ಗೆಲುವಿನ ನಗೆ ಬೀರಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು – 11 ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ
Advertisement
ಉಜ್ಜಯಿನಿ ದಕ್ಷಿಣ ಕ್ಷೇತ್ರವು 2003 ರಿಂದಲೂ ಬಿಜೆಪಿಯ ಭದ್ರಕೋಟೆಯಾಗಿದೆ ಎಂದು ಹೇಳಲಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 163 ಸ್ಥಾನಗಳೊಂದಿಗೆ ಬಹುಮತ ಪಡೆದರೆ, ಕಾಂಗ್ರೆಸ್ 66 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತು. ಇದನ್ನೂ ಓದಿ: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ
ಆಯ್ಕೆ ಪ್ರಕ್ರಿಯೆ ಬಳಿಕ ಮಾತನಾಡಿದ ನಿಯೋಜಿತ ಸಿಎಂ ಮೋಹನ್ ಯಾದವ್, “ನಾನು ಪಕ್ಷದ ಸಣ್ಣ ಕಾರ್ಯಕರ್ತ, ನಿಮ್ಮೆಲ್ಲರಿಗೂ, ರಾಜ್ಯ ನಾಯಕತ್ವ ಮತ್ತು ಕೇಂದ್ರ ನಾಯಕತ್ವಕ್ಕೆ ಧನ್ಯವಾದಗಳು. ನಿಮ್ಮ ಪ್ರೀತಿ ಮತ್ತು ಬೆಂಬಲದಿಂದ ನನ್ನ ಜವಾಬ್ದಾರಿಯನ್ನು ಪೂರೈಸಲು ಪ್ರಯತ್ನಿಸುತ್ತೇನೆ” ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ವಿಶೇಷವಾಗಿ ಧನ್ಯವಾದ ತಿಳಿಸಿದರು.