Connect with us

Cinema

`ಮೋಕ್ಷ’ ಟ್ರೇಲರ್ ಬಿಡುಗಡೆ ಮಾಡಿದ ಅಭಿನಯ ಚಕ್ರವರ್ತಿ ಸುದೀಪ್

Published

on

ಬೆಂಗಳೂರು: ಹೊಸಬರ ವಿನೂತನ ಪ್ರಯತ್ನ ಇರುವ `ಮೋಕ್ಷ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ `ಮೋಕ್ಷ’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಚಿತ್ರದ ಟ್ರೇಲರ್ ಇಂಟ್ರಸ್ಟಿಂಗ್ ಆಗಿ ಮೂಡಿ ಬಂದಿದ್ದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಕಳೆದ ವರ್ಷ ಟೀಸರ್ ಬಿಡುಗಡೆ ಮಾಡಿ ಚಿತ್ರದ ಬಗ್ಗೆ ಗಮನ ಸೆಳೆದಿದ್ದ `ಮೋಕ್ಷ’ ಚಿತ್ರತಂಡ ಇದೀಗ ಕುತೂಹಲ ಭರಿತ ಟ್ರೇಲರ್ ಮೂಲಕ ಎಲ್ಲರ ಚಿತ್ತ ಸೆಳೆದಿದೆ. ಸೈಕಲಾಜಿಕಲ್ ಸಸ್ಪೆನ್ಸ್, ಥ್ರಿಲ್ಲರ್ ಕಥಾನಕ ಹೊಂದಿರುವ ಈ ಸಿನಿಮಾವನ್ನು ಸಮರ್ಥ್ ನಾಯಕ್ ನಿರ್ದೇಶನ ಮಾಡಿದ್ದಾರೆ. ಐಟಿ ಕ್ಷೇತ್ರದ ಸಮರ್ಥ್ ನಾಯಕ್ ನಿರ್ದೇಶನದ ಚೊಚ್ಚಲ ಚಿತ್ರ ಇದಾಗಿದ್ದು ತಾವೇ ಕಥೆ ಬರೆದು ನಿರ್ದೇಶನ ಮಾಡಿದ್ದು, ತಾಂತ್ರಿಕವಾಗಿಯೂ ಚೆಂದವಾಗಿ ಮೂಡಿ ಬಂದಿರುವ `ಮೋಕ್ಷ’ ಸಿನಿಮಾ ಏಪ್ರಿಲ್ 16ರಂದು ಬಿಡುಗಡೆಯಾಗುತ್ತಿದೆ.

ಕಥೆಯೇ ಹೀರೋ ಆಗಿರೋ ಸಿನಿಮಾದಲ್ಲಿ ಮೋಹನ್ ಧನರಾಜ್, ಆರಾಧ್ಯ ಲಕ್ಷ್ಮಣ್ ನಾಯಕ ಹಾಗೂ ನಾಯಕಿಯಾಗಿ ಅಭಿನಯಿಸಿದ್ದಾರೆ. ಮಾಸ್ಕ್ಮ್ಯಾನ್ ಚಿತ್ರದ ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿದ್ದಾನೆ. ರೋಚಕ ತಿರುವುಗಳನ್ನು ಒಳಗೊಂಡಿರುವ ಈ ಚಿತ್ರಕ್ಕೆ ಕಿಶನ್ ಮೋಹನ್, ಸಚಿನ್ ಬಾಲು ಸಂಗೀತ ನಿರ್ದೇಶನವಿದೆ. ಗುರು ಪ್ರಶಾಂತ್ ರಾಜ್, ಜೋಮ್ ಜೋಸೆಫ್, ಕಿರಣ್ ಹಂಪಾಪುರ ಮೂವರು ಕ್ಯಾಮೆರಾಮ್ಯಾನಗಳು ಛಾಯಾಗ್ರಾಹಕರಾಗಿ ದುಡಿದಿದ್ದಾರೆ. ಹಾಸನ, ಕಾರವಾರ, ಗೋಕಾಕ್, ಗೋವಾ, ಸೇರಿದಂತೆ ಹಲವು ಭಾಗಗಳಲ್ಲಿ `ಮೋಕ್ಷ’ ಸಿನಿಮಾ ಸೆರೆ ಹಿಡಿಯಲಾಗಿದೆ. ಚಿತ್ರದಲ್ಲಿ ತಾರಕ್ ಪೊನ್ನಪ್ಪ ತನಿಖಾಧಿಕಾರಿ ಪಾತ್ರದಲ್ಲಿ ನಟಿಸಿದ್ದು, ಭೂಮಿ, ಪ್ರಶಾಂತ್ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಎಸ್‍ಜಿಎನ್ ಎಂಟಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗಿದ್ದು ಏಪ್ರಿಲ್ 16ರಂದು ಸುಂದರ ಬದುಕಿನ ಶಾಂತಿ ಕದಡಿದ ಸೈಕೋ ಕಥೆ `ಮೋಕ್ಷ’ ಚಿತ್ರಮಂದಿರಕ್ಕೆ ಬರಲಿದೆ.

Click to comment

Leave a Reply

Your email address will not be published. Required fields are marked *