ಚಿತ್ರದುರ್ಗ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನೆರ್ಲಗುಂಟೆ ಎನ್. ತಿಪ್ಪೇಸ್ವಾಮಿ ಪುತ್ರ ಶಿವಕುಮಾರ್ ಅವರು ಅಕಾಲಿಕ ಸಾವಿಗೆ ತುತ್ತಾಗಿದ್ದಾರೆ. 32 ವರ್ಷದ ಶಿವಕುಮಾರ್ ಅವರು ನಿಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಚಿತ್ರದುರ್ಗ, ದಾವಣಗೆರೆ ಹಾಗೂ ಬೆಂಗಳೂರು ಸೇರಿದಂತೆ ಮತ್ತಿತರರ ಕಡೆಗಳಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ; ಕೆನಡಾದಲ್ಲಿ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ: ಕನ್ನಡಿಗ ಸಂಸದ ಬೇಸರ
Advertisement
Advertisement
ಮಾಜಿ ಶಾಸಕ ತಿಪ್ಪೇಸ್ವಾಮಿ ಅವರಿಗೆ ಶಿವಕುಮಾರ್ ಹಾಗೂ ಓರ್ವ ಸುಪುತ್ರಿ ಇದ್ದರು. ಇಪ್ಪತ್ತು ವರ್ಷಗಳ ಹಿಂದೆ ಮಗಳು ಸಹ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಇವರ ಬಲಗೈ ಆಗಿದ್ದಂತಹ ಪುತ್ರ ಶಿವಕುಮಾರ್ ತಂದೆಯ ರಾಜಕೀಯ ಭವಿಷ್ಯಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರು. ಎಲ್ಲಾ ಚುನಾವಣೆಗಳಲ್ಲೂ ತಂದೆಯ ವಾರಿಸುದಾರರಾಗಿ ಕ್ಷೇತ್ರದ ಜನರ ಪ್ರೀತಿಗೆ ಪಾತ್ರರಾಗಿ ಶಿವಣ್ಣ ಅಂತ ಖ್ಯಾತಿಯಾಗಿದ್ದರು.
Advertisement
ಕಳೆದ ವಿಧಾನಸಭಾ ಚುನಾವಣೆ ವೇಳೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿ. ಶ್ರೀರಾಮುಲು ಸ್ಪರ್ಧಿಸಿದ ಕಾರಣ ಎನ್. ತಿಪ್ಪೇಸ್ವಾಮಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಶ್ರೀರಾಮುಲು ವಿರುದ್ಧ ಅತ್ಯಧಿಕ ಮತಗಳಿಂದ ಸೋಲು ಅನುಭವಿಸಿದ್ದರು. ಆಗ ತಮ್ಮ ತಂದೆಯ ಪರ ತಮ್ಮ ಜೀವದ ಹಂಗು ತೊರೆದು ಚುನಾವಣೆ ಎದುರಿಸಿದ್ದರು.
Advertisement
ಇತ್ತೀಚಿನ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ತಮ್ಮ ತಂದೆಯವರಿಗೆ ಬೆನ್ನುಲುಬಾಗಿದ್ದ ಶಿವಕುಮಾರ್ ಅನುಪಸ್ಥಿತಿಯು ಮಾಜಿ ಶಾಸಕ ತಿಪ್ಪೇಸ್ವಾಮಿಯವರಿಗೆ ತುಂಬಲಾರದ ನಷ್ಟ ಎನಿಸಿದೆ.ಮೃತರ ಅಂತ್ಯ ಕ್ರಿಯೆ ನಾಳೆ ಅವರ ಸ್ವಗ್ರಾಮ ನೇರಲುಗುಂಟೆಯಲ್ಲಿ ನಡೆಯಲಿದೆ.