ಮಂಗಳೂರು: ಅಪ್ರಾಪ್ತೆಗೆ ಕಿರುಕುಳ (Harrasment) ನೀಡುತ್ತಿದ್ದ ಆರೋಪದ ಮೇಲೆ ಅನ್ಯಕೋಮಿನ ಯುವಕನನ್ನು (Youth) ಪೊಲೀಸರು (Police) ಬಂಧಿಸಿರುವ ಘಟನೆ ಪುತ್ತೂರಿನಲ್ಲಿ (Puttur) ನಡೆದಿದೆ.
ಕಡಬ (Kadaba) ಮೂಲದ ಶಾಕೀರ್ ಕಿರುಕುಳ ನೀಡಿದ ಆರೋಪಿ. ಯುವಕನ ವರ್ತನೆಯಿಂದ ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಯುವಕನನ್ನು ತಮಗೆ ಒಪ್ಪಿಸುವಂತೆ ಪುತ್ತೂರು ತಾಲೂಕಿನ ನಗರ ಪೊಲೀಸ್ ಠಾಣೆಗೆ ಮುತ್ತಿಗೆಹಾಕಲು ಯತ್ನಿಸಿದ್ದಾರೆ. ಇದನ್ನೂ ಓದಿ: ರಾತ್ರೋರಾತ್ರಿ ಹನುಮ ಧ್ವಜ ತೆರವಿಗೆ ಅಧಿಕಾರಿಗಳ ಎಂಟ್ರಿ – ರೊಚ್ಚಿಗೆದ್ದ ಗ್ರಾಮಸ್ಥರು
ಪುತ್ತೂರಿನಲ್ಲಿ ನಡೆಯುತ್ತಿದ್ದ ಕಂಬಳ ವೀಕ್ಷಿಸಲು ತೆರಳುತ್ತಿದ ವೇಳೆ ಕಿರುಕುಳ ನೀಡಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾಳೆ. ಈ ಹಿನ್ನೆಲೆ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: 6,000 ಕ್ವಿಂಟಾಲ್ ಪಡಿತರ ಅಕ್ಕಿ ಕಳ್ಳತನ ಕೇಸ್ – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ಅರೆಸ್ಟ್
ಘಟನೆಯಿಂದ ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರು ಆರೋಪಿಯನ್ನು ತಮಗೆ ಒಪ್ಪಿಸುವಂತೆ ಠಾಣೆ ಎದುರು ಜಮಾಯಿಸಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಸ್ಥಳಕ್ಕಾಗಮಿಸಿದ ಹಿಂದೂ ಮುಖಂಡ ಅರುಣ್ ಪುತ್ತಿಲ ಯುವಕರನ್ನು ಸಮಾಧಾನಪಡಿಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿಂದು ಶೋಷಿತ ಸಮುದಾಯಗಳ ಬೃಹತ್ ಸಮಾವೇಶ – 2 ಲಕ್ಷಕ್ಕೂ ಅಧಿಕ ಜನ ಭಾಗಿ ನಿರೀಕ್ಷೆ
ಸದ್ಯ ಆರೋಪಿ ಶಾರೀಕ್‌ನನ್ನು ಬಂಧಿಸಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ನಂತರ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಠಾಣೆ ಮುಂದೆ ಸೇರಿದ ಗುಂಪನ್ನು ಚದುರಿಸಿ ಕಳುಹಿಸಿದ್ದಾರೆ. ಇದನ್ನೂ ಓದಿ: ನಿಶ್ಚಿತಾರ್ಥ ಆಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ