ಮಾಲಿವುಡ್ ನಟಿ ರೇವತಿ ಸಂಪತ್ (Revathy Sampath) ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ನಟ ಸಿದ್ಧಿಕಿ ದೂರು ದಾಖಲಿಸಿದ್ದಾರೆ. ಈ ಕುರಿತು ಸಿದ್ಧಿಕ್ (Mollywood Actor Siddique) ಡಿಜಿಪಿಗೆ ದೂರು ನೀಡಿದ್ದಾರೆ.
ಲೈಂಗಿಕ ಆರೋಪ ಕೇಳಿ ಬಂದ ಹಿನ್ನೆಲೆ ಮಲಯಾಳಂ ಸಿನಿಮಾ ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ರೇವತಿ ಸಂಪತ್ ಕುರಿತು ನಟ ಸಿದ್ಧಿಕಿ ದೂರು ನೀಡಿದ್ದು, ನನ್ನ ವಿರುದ್ಧ ಸುಳ್ಳು ಮತ್ತು ಕ್ರಿಮಿನಲ್ ಸಂಚು ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಅಂದಹಾಗೆ, 2016ರಲ್ಲಿ ಸಿನಿಮಾ ಕುರಿತು ಮಾತನಾಡಲು ನನ್ನನ್ನು ಹೋಟೆಲ್‌ವೊಂದಕ್ಕೆ ಸಿದ್ಧಿಕಿ ಕರೆದರು. ನನ್ನನ್ನು ರೂಮ್‌ನಲ್ಲಿ ಲಾಕ್ ಮಾಡಿದರು. ನನಗೆ ಲೈಗಿಂಕ ಕಿರುಕುಳ ನೀಡಿದ್ದಾರೆ. ನಾನು ಬದುಕುತ್ತೀನಾ ಎಂದು ಎನಿಸಿತು. ನಾನು ಕಷ್ಟಪಟ್ಟು ಅಂದು ರೂಮ್‌ನಿಂದ ಹೊರಬಂದೆ. ಮಗಳು ಎಂದು ಕರೆದು ಸಿನಿಮಾದಲ್ಲಿ ಚಾನ್ಸ್ ಕೊಡಿಸೋದಾಗಿ ಹೇಳಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬುದು ನಟಿಯ ಆರೋಪ.
ಇನ್ನೂ ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಕೇರಳ ಚಲನಚಿತ್ರ ಅಕಾಡೆಮಿ ಅಧ್ಯಕ್ಷ್ಯ ಸ್ಥಾನಕ್ಕೆ ಹಾಗೂ ನಟ ಸಿದ್ಧಿಕಿ ಮಲಯಾಳಂ ಸಿನಿಮಾ ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನ್ಯಾ.ಹೇಮಾ ಸಮಿತಿ ವರದಿ ನಂತರ ಮಾಲಿವುಡ್‌ನಲ್ಲಿ ಈ ಬೆಳವಣಿಗೆಯಾಗಿದೆ.
ರಂಜಿತ್ ಅವರು ಅಸಭ್ಯ ವರ್ತನೆ ತೋರಿದ್ದಾಗಿ ಕಳೆದ ವರ್ಷ ಬಂಗಾಳಿ ನಟಿಯೊಬ್ಬರು ಆರೋಪಿಸಿದ್ದರು. ರಂಜಿತ್ ಅವರಿಗೆ ರಾಜೀನಾಮೆ ನೀಡುವಂತೆ ಒತ್ತಡ ಹೇರಲಾಗಿತ್ತು. ಇನ್ನೂ ಸಿದ್ಧಿಕಿ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ನಟಿಯೊಬ್ಬರು ಶನಿವಾರ (ಆ.25) ಆರೋಪಿಸಿದ್ದರು ಎಂದು ವರದಿಯಾಗಿದೆ.
ರಂಜಿತ್ ಅವರು ಸುದ್ದಿವಾಹಿನಿಯೊಂದಕ್ಕೆ ಆಡಿಯೋ ತುಣುಕನ್ನು ಕಳುಹಿಸುವ ಮೂಲಕ ತಮ್ಮ ರಾಜೀನಾಮೆ ನಿರ್ಧಾರ ಘೋಷಿಸಿದ್ದಾರೆ. ಆಡಿಯೋದಲ್ಲಿ, ಅಕಾಡೆಮಿಯ ಅಧ್ಯಕ್ಷ ಸ್ಥಾನ ವಹಿಸಿಕೊಂಡಾಗಿನಿಂದ ಒಂದು ವರ್ಗದ ಜನ ನನ್ನನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಆರೋಪಗಳೆಲ್ಲವೂ ಸುಳ್ಳು ಎಂದು ಸಮಾಜದ ಎದುರು ಸಾಬೀತು ಮಾಡಬೇಕಿದೆ ಎಂದು ಅವರು ಆಡಿಯೋದಲ್ಲಿ ಹೇಳಿದ್ದಾರೆ. ಸಿದ್ದಿಕಿ ಅವರ ರಾಜೀನಾಮೆ ಪತ್ರವನ್ನು ಎಎಂಎಂಎ ಅಧ್ಯಕ್ಷ ಮತ್ತು ನಟ ಮೋಹನ್‌ಲಾಲ್ ಅವರಿಗೆ ಕಳುಹಿಸಿದ್ದಾರೆ. ಸಿದ್ದಿಕಿಯವರ ನಿರ್ಧಾರವನ್ನು ಸಂಘದ ಹಲವು ಸದಸ್ಯರು ಸ್ವಾಗತಿಸಿದ್ದಾರೆ.