ಮಂಗಳೂರು: ಮೇ28 ರಂದು ಕರ್ನಾಟಕ ಬಂದ್ ಗೆ ಕರೆ ಕೊಟ್ಟಿರುವುದು ಬಿಜೆಪಿ ಗೆ ಶೋಭೆ ತರುವಂತದ್ದಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಸಚಿವ ಸಂಪುಟ ಇನ್ನೂ ರಚನೆಯಾಗಿಲ್ಲ. ಸಚಿವ ಸಂಪುಟ ರಚನೆ ಆದ ನಂತರವೇ ಸಾಲ ಮನ್ನಾ ಕುರಿತು ನಿರ್ಧರಿಸಲು ಸಾಧ್ಯವಾಗುವುದು. ಇದು ರಾಜಕೀಯ ಪ್ರೇರಿತ ಬಂದ್ ಎಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
ನನಗೆ ಸಚಿವ ಸ್ಥಾನ ಕೊಡುವ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ಐದು ವರ್ಷಗಳ ಕಾಲ ಸಮ್ಮಿಶ್ರ ಸರ್ಕಾರ ಸುಭದ್ರವಾಗಿ ಇರುತ್ತದೆ. ಯಾವುದೇ ಭಿನ್ನಾಭಿಪ್ರಾಯಗಳು ಎರಡೂ ಪಕ್ಷದಲ್ಲಿ ಇಲ್ಲ ಅಂತಾ ಸ್ಪಷ್ಟಪಡಿಸಿದ್ರು.
Advertisement
ಜೆಡಿಎಸ್ ಜನತೆಗೆ ನೀಡಿದ ಆಶ್ವಾಸನೆಯಂತೆ ಮುಂದಿನ 24 ಗಂಟೆಯೊಳಗೆ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿರುವ 1 ಲಕ್ಷದ ವರೆಗಿನ ರೈತರ ಸಾಲವನ್ನು ಮನ್ನಾ ಮಾಡಬೇಕು ಇಲ್ಲದಿದ್ದಲ್ಲಿ ಮೇ 28, ಸೋಮವಾರದಂದು ಕರ್ನಾಟಕ ಬಂದ್ ಗೆ ಕರೆ ಕೊಡಲಾಗುವುದು ಎಂದು ಬಿಜೆಪಿ ಪ್ರಕಟಿಸಿದೆ.
Advertisement
ಶುಕ್ರವಾರ ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೋಮವಾರ ಕರ್ನಾಟಕ ಬಂದ್ ಕರೆ ನೀಡಿ ಹೊರ ಬಂದಿದ್ದರು. ವಿಧಾನಸೌಧದ ಹೊರಗೆ ಬಂದ ನಂತರವೂ ಕರ್ನಾಟಕ ಬಂದ್ ಗೆ ಕರೆ ನೀಡಲಾಗುವುದು ಅಂತಾ ತಿಳಿಸಿದ್ದರು. ಆದ್ರೆ ಇಂದು ಬೆಳಗ್ಗೆ ಬಂದ್ ಗೆ ಕರೆ ನೀಡಿರೋದು ಬಿಜೆಪಿ ಅಲ್ಲ, ರೈತರು. ನಾಡಿನ ರೈತರಿಗೆ ನಾವೆಲ್ಲ ಬೆಂಬಲ ನೀಡುತ್ತಿದ್ದೇವೆ ಅಂತಾ ಮಾತು ಬದಲಿಸಿದ್ದಾರೆ.