ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕಡೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.31 ಲಕ್ಷ ರೂ. ನಗದು ಮತ್ತು 28 ಲಕ್ಷ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ.
ಕೊಡಗು ಅಬಕಾರಿ ಇಲಾಖೆಯೂ ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ಮಹಾರಾಷ್ಟ್ರದ ಮದ್ಯ ವಶ ಪಡಿಸಿಕೊಂಡಿದ್ದಾರೆ. ಮೈಸೂರಿಂದ ವಯನಾಡಿಗೆ ಲಾರಿಯಲ್ಲಿ ಮದ್ಯವನ್ನು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಆಧಾರದ ಮೇರೆಗೆ ಕೊಡಗು ಜಿಲ್ಲೆಯ ಪೆರುಂಬಾಡಿ ಬಳಿ ಕೊಡಗು ಅಬಕಾರಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಮದ್ಯ ಪತ್ತೆಯಾಗಿದೆ.
Advertisement
Advertisement
28 ಲಕ್ಷ ಮೌಲ್ಯದ ಮದ್ಯ, ಲಾರಿ ಮತ್ತು ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕುಶಾಲನಗರದಲ್ಲಿ ಕೇರಳ ನೋಂದಣಿಯ ಜೀಪ್‍ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6 ಲಕ್ಷ ನಗದು ಪತ್ತೆಯಾಗಿದೆ.
Advertisement
ಕೊಪ್ಪ ಚುನಾವಣಾ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ನಡೆಸುವಾಗ ಈ ಹಣ ಪತ್ತೆಯಾಗಿದೆ. ಕೇರಳ ಮೂಲದ ಜೀವನ್ ಹಾಗೂ ಸಂತೋಷ್ ಬಳಿ ಹಣ ಪತ್ತೆಯಾಗಿದೆ. ಸದ್ಯಕ್ಕೆ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಫ್ಲೈಯಿಂಗ್ ಸ್ಕ್ವಾಡ್ ಅವರು 6,31,050 ರೂಪಾಯಿ ವಶಕ್ಕೆ ಪಡೆದುಕೊಂಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಉಪ ವಿಭಾಗಾಧಿಕಾರಿ ಜವರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement