– ದಲಿತರ ಅನುದಾನದ ಮೇಲೆ ಸರ್ಕಾರದ ಕಣ್ಣು
ಗದಗ: ಅಹಿಂದ ನಾಯಕ ಎಂದು ಹೇಳುವ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಹಿಂದುಳಿದ ವರ್ಗ, ಎಸ್‌ಸಿ, ಎಸ್‌ಟಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಹಾಗೂ ನರಗುಂದ (Naragunda) ಬಿಜೆಪಿ ಶಾಸಕ ಸಿ.ಸಿ ಪಾಟೀಲ (C C Patil) ಆರೋಪಿಸಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿ ಆಗಿದೆ. ಪ್ರಾರಂಭಿಕ 6 ಪಂಚ ವಾರ್ಷಿಕ ಯೋಜನೆಗಳಲ್ಲಿ ಎಸ್ಸಿಪಿ, ಟಿಎಸ್ಪಿ ಯೋಜನೆ ತರಲಿಲ್ಲ. ಕೆ.ಆರ್ ನಾರಾಯಣನ್ ಯೋಜನಾ ಆಯೋಗದ ಉಪಾಧ್ಯಕ್ಷರಾಗಿದ್ದ ವೇಳೆ 7ನೇ ಪಂಚ ವಾರ್ಷಿಕ ಯೋಜನೆಯಲ್ಲಿ ಜಾರಿಗೆ ಬಂದಿದೆ ಎಂಬುದು ಕಾಂಗ್ರೆಸ್‌ನವರಿಗೆ ಗೊತ್ತಿರಲಿ ಎಂದರು. ಇದನ್ನೂ ಓದಿ: ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರೋದು ರಾಜಕೀಯ ದ್ವೇಷ: ನಿಖಿಲ್ ಕುಮಾರಸ್ವಾಮಿ
- Advertisement
- Advertisement
2023-24ರಲ್ಲಿ ಎಸ್ಸಿಪಿ, ಟಿಎಸ್ಪಿನಿಂದ ವಾಪಸ್ ತೆಗೆದುಕೊಂಡಿದ್ದು ಒಟ್ಟು 11,144 ಕೋಟಿ ರೂ. ಹಣ. 2024-25ರಲ್ಲಿ 14,488 ಕೋಟಿ ರೂ. ಹಣ ವಾಪಾಸ್ ತೆಗೆದುಕೊಂಡಿದ್ದಾರೆ. ಇಲ್ಲಿಯವರೆಗೆ ಸುಮಾರು 25,000 ಕೋಟಿ ರೂ. ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿದ್ದಾರೆ. ಮೂಖಪ್ರೇಕ್ಷಕರಾಗಿರುವ ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಎಸ್.ಸಿ ಮಹದೇವಪ್ಪ, ಮುನಿಯಪ್ಪ, ಪರಮೇಶ್ವರ್ ಅವರು ಪ್ರಶ್ನಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾರತದ ಅತಿದೊಡ್ಡ ಗ್ರೀನ್‌ಫೀಲ್ಡ್ ‘ದೇಶೀಯ ಕಾರ್ಗೋ ಟರ್ಮಿನಲ್’ ಪ್ರಾರಂಭ
ಇದೆಲ್ಲಾ ಇವರು ದಲಿತರ ಮೇಲೆ ತೋರಿಸುತ್ತಿರುವ ಪ್ರೀತಿ. ಮುಂಬರುವ ಬಜೆಟ್‌ನಲ್ಲಿ ಎಸ್‌ಸಿ, ಎಸ್‌ಟಿ ವರ್ಗಕ್ಕೆ ಮೀಸಲಿಟ್ಟ 15,000 ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ತೆಗೆದುಕೊಳ್ಳುವ ಸಿದ್ಧತೆ ನಡೆಸಿದ್ದಾರೆ. ಇದನ್ನು ಕೈಬಿಡದಿದ್ದರೆ ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮುಂದಿನ ಕುಂಭಮೇಳ ಎಲ್ಲಿ ನಡೆಯುತ್ತೆ? – ಈಗಲೇ ತಯಾರಿ ಆರಂಭಿಸಿದ ಸರ್ಕಾರ
ಪರಿಷತ್ ಸದಸ್ಯ ಎಸ್.ವಿ ಸಂಕನೂರ ಮಾತನಾಡಿ, ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾನೂನು ಬಾಹಿರ ವರ್ಗಾವಣೆ ಮಾಡುತ್ತಿದೆ. ಕಾನೂನು ಉಲ್ಲಂಘಿಸಿದವರ ಮೇಲೆ ಕ್ರಮ ಏಕೆ ಕೈಗೊಳ್ಳುತ್ತಿಲ್ಲ. ರಾಜಕಾರಣಿ, ಹಿರಿಯ ಅಧಿಕಾರಿಗಳೇ ಈ ಅಕ್ರಮ ಎಸಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದೆಂತೆ ಆಗಿದೆ. ಈಗ ಯಾರ ಮೇಲೆ ಕ್ರಮ ಕೈಗೊಳ್ಳಲಬೇಕು ಎಂದು ಸರ್ಕಾರವನ್ನು ಪ್ರಶ್ನಿಸಿದರು.
ಎಸ್‌ಸಿ, ಎಸ್‌ಟಿ ಸಮುದಾಯದ ಮೇಲೆ ಕಾಳಜಿ ಇದ್ದರೆ ಬಜೆಟ್‌ನಲ್ಲಿ ಮೀಸಲಿಟ್ಟ ಅನುದಾನವನ್ನು ಸಂಪೂರ್ಣ ಬಿಡುಗಡೆ ಮಾಡಬೇಕಿತ್ತು. ಆರ್ಥಿಕ ವರ್ಷ ಕಳೆದರೂ ಇನ್ನೂ ಪೂರ್ಣ ಅನುದಾನ ಬಿಡುಗಡೆ ಮಾಡಿಲ್ಲ. ನಿಯಮ ಉಲ್ಲಂಘಿಸಿ ಹಣ ವರ್ಗಾವಣೆ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿ ಆಗಿದೆ. ಹೀಗಾಗಿ ಕಾಂಗ್ರೆಸ್ ಸರ್ಕಾರ ಅನ್ಯ ಮಾರ್ಗ ಹಿಡಿದಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಅಪಘಾತಕ್ಕೆ ಕೋಮಾ ಸ್ಥಿತಿಯಲ್ಲಿ ಭಾರತೀಯ ವಿದ್ಯಾರ್ಥಿನಿ
ಎಸ್‌ಸಿ ಘಟಕದ ಅಧ್ಯಕ್ಷ ಮಂಜುನಾಥ ಹುಡಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ, ಮಂಜುನಾಥ ಮುಳಗುಂದ, ಲಿಂಗರಾಜ ಪಾಟೀಲ, ಫಕ್ಕಿರೇಶ ರಟ್ಟಿಹಳ್ಳಿ, ರಾಮಣ್ಣ ಚವಾಣ್, ಸುರೇಶ್ ಛಲವಾದಿ, ಮಲ್ಲಪ್ಪ ಮಾದರ್, ಈಶ್ವರಪ್ಪ ರಂಗಪ್ಪನವರು, ಯಲ್ಲಪ್ಪ ಶಿರಿ ಸೇರಿ ಹಲವರು ಉಪಸ್ಥಿತರಿದ್ದರು.