ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwar Hill) ಹುಂಡಿ ಎಣಿಕೆ ಮಾಡಲಾಗಿದ್ದು, ಈ ಬಾರಿಯೂ ಮಾದಪ್ಪ ಕೋಟಿ ಒಡೆಯನಾಗಿದ್ದಾನೆ.
ಚಾಮರಾಜನಗರ (Chamarajanagara) ಜಿಲ್ಲೆಯ ಹನೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 35 ದಿನಗಳ ಅವಧಿಯಲ್ಲಿ ಬರೋಬ್ಬರಿ 3.26 ಕೋಟಿ ಕೋಟಿ ರೂ. ಸಂಗ್ರಹವಾಗಿದೆ. ಇದನ್ನೂ ಓದಿ: ನಮ್ಮ ಸರ್ಕಾರ ತೆಗೆಯಲು ಪ್ಲ್ಯಾನ್ ನಡೆದಿದೆ ಒಗ್ಗಟ್ಟಾಗಿ ಇರಿ: ಖರ್ಗೆ ಶಾಕಿಂಗ್ ಹೇಳಿಕೆ
ಅಲ್ಲದೇ 47 ಗ್ರಾಂ ಚಿನ್ನ, 2 ಕೆಜಿ 200 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ. ಇದರೊಂದಿಗೆ 11 ವಿದೇಶಿ ನೋಟುಗಳು, 2,000 ರೂ. ಮುಖಬೆಲೆಯ 20 ನೋಟುಗಳು ಕಂಡುಬಂದಿವೆ. ಸಾಲೂರು ಶ್ರೀಗಳ ನೇತೃತ್ವದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯ ನಡೆಯಿತು. ಇದನ್ನೂ ಓದಿ: ಏ.25 ರಂದು ಬೆಂಗಳೂರಿನಲ್ಲಿ ವಿವೇಕಾನಂದರ ಜೀವನಾಧಾರಿತ ‘ವೀರ ಸಂನ್ಯಾಸಿಯ ಆತ್ಮ ಗೀತೆ’ ಪ್ರದರ್ಶನ