ಬಳ್ಳಾರಿ: ಬಳ್ಳಾರಿ ಲೋಕಸಭಾ ಉಪಚುನಾವಣೆ ಗೆಲ್ಲಬೇಕೆಂದು ಪಟ್ಟು ಹಿಡಿದಿರುವ ಕಾಂಗ್ರೆಸ್ ನಾಯಕರು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.
ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಉಗ್ರಪ್ಪರಿಗೆ ಮತ ಹಾಕುವಂತೆ ಮತದಾರರಿಗೆ ಹಣವನ್ನು ಹಂಚಲಾಗುತ್ತಿದೆ ಎನ್ನಲಾಗುತ್ತಿದೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಸಿದ್ದಲಿಂಗಪ್ಪ ಚೌಕಿ ಬಳಿ ರಾತ್ರಿ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಹಣ ಹಂಚುತ್ತಿದ್ದ ದೃಶ್ಯಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.
ಮತದಾರರಿಗೆ ಒಂದು ಮತಕ್ಕೆ ನೂರು ರೂಪಾಯಿಯಂತೆ ಹಣ ನೀಡುತ್ತಿದ್ದು, ಹಣ ಹಂಚಿಕೆಗೂ ಮುನ್ನ ಮತದಾರರ ವೋಟರ್ ಸ್ಲಿಪ್ ನೋಡಿ ಟೋಕನ್ ನೀಡಿ ಬೇರೆಡೆ ಪ್ರತಿ ಮತಕ್ಕೆ ನೂರು ರೂಪಾಯಿ ಹಣ ಹಂಚುತ್ತಿರುವ ದೃಶ್ಯಗಳನ್ನು ಸ್ಥಳೀಯರೊಬ್ಬರು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.
ಮತದಾರರು ಸಹ ತಮ್ಮ ವೋಟರ್ ಸ್ಲಿಪ್ ಕೊಟ್ಟು ಪ್ರತಿ ವೋಟಿಗೆ ನೂರು ರೂಪಾಯಿ ಹಣ ಪಡೆಯುತ್ತಿರುವ ದೃಶ್ಯಗಳು ಸೆರೆಯಾಗಿದೆ. ಕಳೆದೆರಡು ದಿನಗಳಿಂದ ಹಗಲು ರಾತ್ರಿಯೆನ್ನದೇ ಹಣ ಹಂಚಿಕೆ ಮಾಡುತ್ತಿದ್ದರೂ ಚುನಾವಣಾಧಿಕಾರಿಗಳು ಮಾತ್ರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದ ಪರಿಣಾಮ ಹಣದ ಹೊಳೆ ಎಲ್ಲೆಡೆ ಜೋರಾಗಿ ಹರಿಯುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv