Connect with us

Districts

ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಹಣ ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿ- ರಾಹುಲ್ ಗಾಂಧಿ

Published

on

ನವದೆಹಲಿ: ದೆಹಲಿಯಲ್ಲಿ ಲಾಕ್‍ಡೌನ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರಿಗೆ ಆರ್ಥಿಕ ನೆರವು ನೀಡಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ.

ಲಾಕ್‍ಡೌನ್ ಘೋಷಣೆಯಾಗುತ್ತಿದ್ದಂತೆ ಸಾವಿರಾರು ಮಂದಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಕೆಲಸವೂ ಇಲ್ಲದೇ, ದುಡಿಮೆಯಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಈ ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಹಣ ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕೋವಿಡ್ ಸ್ಥಿತಿ ಭಯವನ್ನು ಹುಟ್ಟಿಸುತ್ತಿದೆ. ಸೂಕ್ತ ಸಮಯದಲ್ಲಿ ಲಾಕ್‍ಡೌನ್‍ನಂತಹ ನಿಯಮಗಳನ್ನು ತೆಗೆದುಕೊಳ್ಳುವಲ್ಲಿ ಕೇಂದ್ರ ಸರ್ಕಾರ ವಿಫಲವಾಗುತ್ತಿದೆ. ವಲಸೆ ಕಾರ್ಮಿಕರು ಮತ್ತೆ ನಗರಗಳನ್ನು ಬಿಟ್ಟು ತಮ್ಮೂರಿನತ್ತ ಹೊರಟಿದ್ದಾರೆ. ಇದು ನಿಮ್ಮ ಯೋಜನೆಯಾ? ಬಡವರು, ಕಾರ್ಮಿಕರು ಮತ್ತು ಬೀದಿಬದಿಯ ವ್ಯಾಪಾರಿಗಳಿಗೆ ಆರ್ಥಿಕ ನೆರವು ಬೇಕಾಗಿದೆ. ದಯವಿಟ್ಟು ಅವರಿಗೆ ನೆರವಾಗಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.

ದೆಹಲಿಯಲ್ಲಿ ನಿನ್ನೆ ರಾತ್ರಿ 10 ಗಂಟೆಗೆ ಪ್ರಾರಂಭವಾದ ಲಾಕ್‍ಡೌನ್ ಏಪ್ರಿಲ್ 26ರ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಇರಲಿದೆ. ಅಗತ್ಯ ಸೇವೆಗಳಿಗೆ ಮಾತ್ರ ಅನುವು ಮಾಡಿಕೊಡಲಾಗಿದೆ. ಆದರೆ ಜನರು ಭಯಗೊಂಡು ತಮ್ಮ ಊರುಗಳಿಗೆ ಪ್ರಯಾಣ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *