ಧಾರವಾಡ: ನನ್ನ ಕಚೇರಿ ಹೆಸರನ್ನು ದುರ್ಬಳಕೆ ಮಾಡಿದವರ ಬಗ್ಗೆ ಈಗಾಗಲೇ ಮಾಹಿತಿ ಸಿಕ್ಕಿದ್ದು, ಈ ಸಂಬಂಧ ಈಗಾಗಲೇ ನಾನು ದೂರು ನೀಡಿದ್ದೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಕಚೇರಿ ಹಾಗೂ ನನ್ನ ಹೆಸರಿನ ಮೇಲೆ ಊಟಿ ಮತ್ತು ಚೆನ್ನೈನಲ್ಲಿ ಕೆಲವರು ದುರ್ಬಳಕೆ ಮಾಡಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಸಿಕ್ಕಿದೆ. ಅಲ್ಲಿರುವ ಯಾರೋ ಒಬ್ಬ ವ್ಯಕ್ತಿ ಫೋನ್ ಮಾಡಿ ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಈ ಸಂಬಂಧ ಬೆಂಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ತಕ್ಷಣ ಇದನ್ನು ಸಿಸಿಬಿಗೆ ವರ್ಗಾಯಿಸಿ ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಬಂಧನ ಆಗಬೇಕು. ಅವರ ಫೋನ್ ನಂಬರ್ ಕೂಡ ನಾನು ಕೊಟ್ಟಿದ್ದೇನೆ. ಯಾರು, ಯಾವ ಕಾರಣಕ್ಕೆ ಹೀಗೆ ಮಾಡುತ್ತಿದ್ದಾರೆ ಹಾಗೂ ಇದರ ಹಿಂದೆ ಯಾರ ಕೈವಾಡ ಇದೆ ಎಂಬುದನ್ನು ಪತ್ತೆ ಮಾಡಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದರು. ಇದನ್ನೂ ಓದಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯ ಆಪ್ತ ಸಹಾಯಕ ಎಂದು ಹಣ ಪಡೆದು ವಂಚನೆ – ಪ್ರಕರಣ ದಾಖಲು
ಏನಿದು ಆರೋಪ:
ಚೆನ್ನೈ, ಊಟಿಯ ಲ್ಯಾಂಡ್ ಲಾರ್ಡ್ಸ್, ಕೃಷಿಕರು ಹಾಗೂ ಬ್ಯುಸಿನೆಸ್‍ಮೆನ್‍ಗಳಿಗೆ ಕಳೆದ ಮೂರು ತಿಂಗಳಿಂದ ವಂಚನೆ ಮಾಡ್ತಿರೋದು ಗೊತ್ತಾಗಿದೆ. ಪ್ರಕಾಶ್ ಎಂಬಾತ ಸಚಿವೆ ಶೋಭಾ ಕರಂದ್ಲಾಜೆ ಆಪ್ತ ಅಂತ ಹೇಳಿಕೊಂಡು ಹಣ ಪಡೆದಿದ್ದಾನಂತೆ. ಅಲ್ಲದೇ ಕೇಂದ್ರ ಸರ್ಕಾರದ ಟೆಂಡರ್‍ಗಳನ್ನು ಕೊಡಿಸುವುದಾಗಿ ಬರವಸೆ ಕೂಡ ಕೆಲವರಿಗೆ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸಚಿವರ ಆಪ್ತ ಸಹಾಯಕ ವರುಣ್ ಆದಿತ್ಯ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಮೋದಿ ಈ ದೇಶದ ಪ್ರಧಾನಿ, ಮೈಸೂರಿಗೆ ಬರೋದ್ರಲ್ಲಿ ತಪ್ಪೇನಿಲ್ಲ: ಸಿದ್ದರಾಮಯ್ಯ