ಬಳ್ಳಾರಿ/ಬೆಂಗಳೂರು: ಅಕ್ರಮ ಹಣ ವರ್ಗಾವಣೆ (Money Laundering Case) ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ (Congress MLA) ಭರತ್ ರೆಡ್ಡಿ (Bharath Reddy) ಮನೆ, ಕಚೇರಿ ಹಾಗೂ ಕುಟುಂಬ ಸದಸ್ಯರ ಮನೆ ಸೇರಿ ಒಟ್ಟು 13 ಕಡೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ.
ಬೆಂಗಳೂರಿನಿಂದ ಬಂದ ಅಧಿಕಾರಿಗಳು ಭರತ್ ರೆಡ್ಡಿ, ಬುಡಾ ಮಾಜಿ ಅಧ್ಯಕ್ಷ ಎನ್.ಪ್ರತಾಪ್ ರೆಡ್ಡಿ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದೆ. ಅಧಿಕಾರಿಗಳು ಏಕ ಕಾಲಕ್ಕೆ ಮನೆ ಹಾಗೂ ಕಚೇರಿಯ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಚುನಾವಣೆ ಹೊಸ್ತಿಲಲ್ಲಿ ಆಪರೇಷನ್ ಕಾಂಗ್ರೆಸ್ – ಕೊತ್ತುರು ಬಾಂಬ್‌ಗೆ ಸಮೃದ್ಧಿ, ವೆಂಕಟಶಿವಾರೆಡ್ಡಿ ಸ್ಪಷ್ಟನೆ
ಶಾಸಕರ ತಂದೆ ಸೂರ್ಯ ನಾರಾಯಣ ರೆಡ್ಡಿ, ಶಾಸಕರ ಚಿಕ್ಕಪ್ಪ ಪ್ರತಾಪ್ ರೆಡ್ಡಿ, ಸಂಬಂಧಿ ಸತೀಶ್ ರೆಡ್ಡಿ ಅವರ ಮನೆ ಕಚೇರಿ ಮೇಲೆ ದಾಳಿ ನಡೆಸಿದೆ. ಭರತ್ ರೆಡ್ಡಿ ಕುಟುಂಬ ಗ್ರಾನೈಟ್ ಬಿಸಿನೆಸ್ ಹೊಂದಿದ್ದು ಬಳ್ಳಾರಿ, ಬೆಂಗಳೂರು, ಚೆನ್ನೈ ಸೇರಿದಂತೆ ಒಟ್ಟು 13 ಕಡೆಯಲ್ಲಿ ದಾಳಿ ನಡೆದಿದೆ. ಇದನ್ನೂ ಓದಿ: ಜಿಮ್ಸ್ ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿದ 38 ವಿದ್ಯಾರ್ಥಿಗಳು ಅಮಾನತು
ಸಿಆರ್‌ಪಿಎಫ್ ಭದ್ರತೆಯಲ್ಲಿ ದಾಳಿ ನಡೆದಿದೆ. ಸದ್ಯ ಬಳ್ಳಾರಿಯ ಗಾಂಧಿನಗರದ ರಾಘವೇಂದ್ರ ಎಂಟರ್‌ಪ್ರೈಸಸ್ ಕಚೇರಿಯಲ್ಲಿ ಹೆಚ್ಚಿನ ಸಂಖ್ಯೆಯ ಅಧಿಕಾರಿಗಳಿದ್ದು ದಾಖಲೆ ಪರಿಶೀಲಿಸುತ್ತಿದ್ದಾರೆ.