ಬೆಂಗಳೂರು: ಅಕ್ರಮ ಹಣ ವರ್ಗಾವಣೆ (Money Laundering Case) ಆರೋಪದಡಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail) ಅವರನ್ನು 2 ದಿನ ಇ.ಡಿ ಕಸ್ಟಡಿಗೆ (ED Custody) ನೀಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಧ್ಯಂತರ ಜಾಮೀನು ನೀಡುವಂತೆ ಸೈಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಅನಾರೋಗ್ಯದ ಹಿನ್ನೆಲೆ ಜಾಮೀನು ನೀಡಲು ಮನವಿ ಮಾಡಿದ್ದರು. ಇನ್ನು ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸುವ ಸಲುವಾಗಿ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಇ.ಡಿ ಕಸ್ಟಡಿಗೆ ಕೇಳಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಸಂತೋಷ್ ಗಜಾನನ ಭಟ್, ಸತೀಶ್ ಸೈಲ್ ಅವರನ್ನು 2 ದಿನ ಇ.ಡಿ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದ್ದಾರೆ. ಸೆ.12ರಂದು ಸಂಜೆ 5 ಗಂಟೆಗೆ ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ಬಿಜೆಪಿಯವ್ರೇ ನಿಮ್ಮ ಮಕ್ಳನ್ನು ವಿದೇಶದಿಂದ ಕರೆಸಿ, ಅವ್ರನ್ನ ಮುಂದೆ ಬಿಟ್ಟು ಹೋರಾಟ ಮಾಡಿ: ಪ್ರಿಯಾಂಕ್ ಖರ್ಗೆ
ಇತ್ತೀಚೆಗೆ ಅವರ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿತ್ತು. 1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್‌ಗಳು ಮತ್ತು 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ ಸೀಜ್ ಮಾಡಿತ್ತು. ಇದನ್ನೂ ಓದಿ: ಬುರುಡೆ ಗ್ಯಾಂಗ್ ಲಾಕ್ ಮಾಡಲು ಎಸ್‌ಐಟಿಗೆ ಸಾಕ್ಷ್ಯಾಧಾರದ ಕೊರತೆ – ಚಿನ್ನಯ್ಯ ಮಾತ್ರ ಬಲಿಪಶು?
ಅಕ್ರಮ ಅದಿರು ಪ್ರಕರಣದಲ್ಲಿ ಜಾಮೀನಿನ ಮೇಲೆ ಶಾಸಕ ಸತೀಶ್ ಸೈಲ್ ಹೊರಗಿದ್ದರು. ಆ.13 ಮತ್ತು 14 ರಂದು ಇ.ಡಿ ಅಧಿಕಾರಿಗಳು, ಶಾಸಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಈ ವೇಳೆ ಅಪಾರ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ಸೈಲ್ ಅವರನ್ನು ಮಂಗಳವಾರ ಇ.ಡಿ ಅಧಿಕಾರಿಗಳು ಬಂಧಿಸಿದ್ದರು. ಇದನ್ನೂ ಓದಿ: ಆರ್ಥಿಕ ಅವ್ಯವಸ್ಥೆ – ಫ್ರಾನ್ಸ್‌ನಲ್ಲೂ ಕಟ್ಟೆಯೊಡೆದ ಜನಾಕ್ರೋಶ, ಬೀದಿಗಿಳಿದು ಪ್ರತಿಭಟನೆ; 200 ಮಂದಿ ಅರೆಸ್ಟ್