ಮಂಡ್ಯ: ತಾಂತ್ರಿಕ ಕಾರಣದಿಂದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ (Gruhalakshmi Scheme) ಹಣ ಜಮೆ ಆಗಿರಲಿಲ್ಲ. ಇಂದಿನಿಂದ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮೆ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಘೋಷಣೆ ಮಾಡಿದ್ದಾರೆ.
ಮಂಡ್ಯದ (Mandya) ಜನಾಂದೋಲನದಲ್ಲಿ (Janandolana) ಮಾತನಾಡಿದ ಅವರು, ನಿನ್ನೆ ಡಿಸಿಎಂ ಭಾಷಣ ಮಾಡುವಾಗ ಗೃಹಲಕ್ಮಿ ಹಣ ಬಂದಿಲ್ಲ ಎಂದು ಮಹಿಳೆಯರು ಹೇಳಿದ್ದರು. ತಾಂತ್ರಿಕ ಕಾರಣದಿಂದ ಹಣ ಬಂದಿರಲಿಲ್ಲ. ಇಂದಿನಿಂದ ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆಯಾಗಲಿದೆ. ನುಡಿದಂತೆ ನಡೆಯುವವರು ಕಾಂಗ್ರೆಸ್‌ನವರು. ನಮಗೆ ಸಿಕ್ಕ ಅಧಿಕಾರದಲ್ಲಿ ಜನರಿಗೆ ಒಳ್ಳೆಯದು ಮಾಡುತ್ತೇವೆ. ಬರಗಾಲದಲ್ಲಿ ಪರಿಹಾರ ಕೊಡಲು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮನಸ್ಸಿಲ್ಲ. ಆದರೆ ಬಿಜೆಪಿ ಭ್ರಷ್ಟ ಸರ್ಕಾರ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: Bangladesh Unrest |ಮಾಜಿ ಕ್ರಿಕೆಟಿಗ ಮಶ್ರಫೆ ಮೊರ್ತಾಜಾ ಮನೆಗೆ ನುಗ್ಗಿ ಬೆಂಕಿ
Advertisement
Advertisement
ಪೆನ್ ಡ್ರೈವ್ ಹಂಚುವ ಮೂಲಕ ದೇವೇಗೌಡರ ಕುಟುಂಬಕ್ಕೆ ವಿಷ ಹಾಕಿದ್ದಾರೆ ಅಂತಿರಲ್ಲಾ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಕುಟುಂಬ ಒಂದು ಕುಟುಂಬ ಅಲ್ವಾ? ನಿಮಗೆ ನಾಚಿಗೆ ಆಗಲ್ವಾ? ಪೆನ್‌ಡ್ರೈವ್ ಹಂಚಿದ್ದು ಪ್ರೀತಂಗೌಡ ಅಂತ ತಾವೇ ಒಪ್ಪಿಕೊಂಡ್ರಲ್ಲ. ಕುಮಾರಣ್ಣ ದೇವೇಗೌಡರ ಕುಟುಂಬಕ್ಕೆ ವಿಷ ಎರೆದರು ಅಂತೀರಾ. ಆದರೆ ದೌರ್ಜನ್ಯಕ್ಕೊಳಗಾದ ಮಹಿಳೆಯರ ಕುಟುಂಬ, ಕುಟುಂಬ ಅಲ್ವಾ? ನೂರಾರು ಮಹಿಳೆಯರ ಮರ್ಯಾದೆ ಬೀದಿ ಪಾಲು ಆಯ್ತಲ್ಲಾ, ನಿಮಗೆ ನಾಚಿಕೆ ಆಗಲ್ವಾ? ಜನಪ್ರತಿನಿಧಿ ಆಗಲು ನಿಮಗೆ ಯಾವ ನೈತಿಕತೆ ಇದೆ? ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಉಜಿರೆಯ ಸುರ್ಯ ದೇವಸ್ಥಾನಕ್ಕೆ ರಾಧಿಕಾ ಜೊತೆಗೂಡಿ ಆಗಮಿಸಿ ಹರಕೆ ತೀರಿಸಿದ ಯಶ್
Advertisement
ಮುಂದುವರಿದು ಮಾತನಾಡಿ, ಕರ್ನಾಟಕ ಜನತೆ ಬಿಜೆಪಿ ಭ್ರಷ್ಟಾಚಾರ ಕಂಡಿದೆ, ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಕೆಡವಿದ ಬಿಜೆಪಿ ಜೊತೆ ಕುಮಾರಣ್ಣ ರಾಜಕಾರಣ ಮಾಡ್ತಿದ್ದಾರೆ. ಇದರ ನಡುವೆ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಜೀರೋ ಸಿಕ್ಕಿದ್ದು, ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರದಿಂದ ಅನ್ಯಾಯಯವಾಗಿದೆ. ಇದೀಗ ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು ಬಿಜೆಪಿ-ಜೆಡಿಎಸ್ ಗಿಮಿಕ್ ಮಾಡುತ್ತಿದ್ದಾರೆ. ಕ್ಲೀನ್ ಇಮೇಜ್ ಹಾಳು ಮಾಡಲು ಮುಡಾ ಹಗರಣ ಸಿದ್ದರಾಮಯ್ಯ ತಲೆಗೆ ಕಟ್ಟಲು ಯತ್ನಿಸುತ್ತಿದೆ. ಬಿಜೆಪಿ ಸರ್ಕಾರದಲ್ಲಾದ ಹಗರಣಗಳನ್ನು ಕರ್ನಾಟಕದ ಜನ ಮರೆತಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಬಾಂಗ್ಲಾ ಕ್ರಾಂತಿ ಹಿಂದೆ ಪಾಕ್ ಕೈವಾಡ ಇದ್ಯಾ – ಸರ್ವಪಕ್ಷ ಸಭೆಯಲ್ಲಿ ರಾಹುಲ್ ಪ್ರಶ್ನೆಗೆ ಉತ್ತರ ಕೊಟ್ಟ ಜೈಶಂಕರ್