ಬರ್ನ್: ವಿಶ್ವ ಆರೋಗ್ಯ ಸಂಸ್ಥೆ(WHO) ಮಂಕಿಪಾಕ್ಸ್ ಅನ್ನು ಜಾಗತಿಕ ತುರ್ತು ಪರಿಸ್ಥಿತಿ ಎಂದು ಶನಿವಾರ ಘೋಷಣೆ ಮಾಡಿದೆ.
WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಜಾಗತಿಕವಾಗಿ ಏಕಾಏಕಿ ಹರಡುತ್ತಿರುವ ಮಂಕಿಪಾಕ್ಸ್ ಅಂತಾರಾಷ್ಟ್ರೀಯ ಕಾಳಜಿಯಿಂದಾಗಿ ತುರ್ತು ಪರಿಸ್ಥಿತಿಯನ್ನು ಪ್ರತಿನಿಧಿಸುತ್ತದೆ ಎಂದಿದ್ದಾರೆ.
Advertisement
Advertisement
Advertisement
ಕಳೆದ ತಿಂಗಳು WHO ತುರ್ತು ಸಭೆ ನಡೆಸಿ, ಮಂಕಿಪಾಕ್ಸ್ ಅನ್ನು ತುರ್ತು ಪರಿಸ್ಥಿತಿ ಅಲ್ಲ, ಇದು ಹೆಚ್ಚು ಅಪಾಯಕಾರಿಯಾಗಿಲ್ಲ ಎಂದು ತಿಳಿಸಿತ್ತು. ಈ ಘೋಷಣೆ ಬಳಿಕ ಜಾಗತಿಕವಾಗಿ ಮಂಕಿಪಾಕ್ಸ್ ಪ್ರಕರಣಗಳು ಏರಿಕೆ ಕಂಡವು. ಇದೀಗ ಒಟ್ಟು 75 ದೇಶಗಳಲ್ಲಿ ಮಂಕಿಪಾಕ್ಸ್ ಕಂಡುಬಂದಿದ್ದು, ಸೋಂಕಿಗೆ 16,000 ಜನರು ಗುರಿಯಾಗಿದ್ದಾರೆ ಹಾಗೂ 5 ಜನ ಮಂಕಿಪಾಕ್ಸ್‌ನಿಂದ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಝೀರೋ ಟ್ರಾಫಿಕ್‍ನಲ್ಲಿ ರಸ್ತೆ ದಾಟಿದ ಹುಲಿರಾಯನ ವೀಡಿಯೋ ವೈರಲ್
Advertisement
ಮಂಕಿಪಾಕ್ಸ್ ಅನ್ನು ತುರ್ತು ಪರಿಸ್ಥಿತಿಯ ಪರಿಗಣನೆಗೆ ತೆಗೆದುಕೊಳ್ಳಲು ಕೆಲವು ಅಂಶಗಳನ್ನು ಪಟ್ಟಿ ಮಾಡಲಾಗಿದೆ. ಈ ಹಿಂದೆ ಮಂಕಿಪಾಕ್ಸ್ ವೈರಸ್ ಅನ್ನು ಎದುರಿಸಿರದ ದೇಶಗಳಲ್ಲಿ ಇದು ಅತ್ಯಂತ ವೇಗವಾಗಿ ಹರಡುತ್ತಿದೆ. ಅಂತಾರಾಷ್ಟ್ರೀಯ ಆರೋಗ್ಯ ನಿಯಮಗಳ ಅಡಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲು 3 ಮಾನದಂಡಗಳನ್ನು ಪೂರೈಸಲಾಗಿದೆ. ತುರ್ತು ಪರಿಸ್ಥಿತಿಯ ಸಲಹೆಯೂ ಒಮ್ಮತಕ್ಕೆ ಬಾರದೇ ಇರುವುದು ಕೂಡಾ ಇದೀಗ ತುರ್ತು ಪರಿಸ್ಥಿತಿ ಘೋಷಣೆಗೆ ಕಾರಣವಾಗಿದೆ.
ಮಂಕಿಪಾಕ್ಸ್ ವೈರಸ್ ಬಗೆಗಿನ ವೈಜ್ಞಾನಿಕ ತತ್ವ, ಪುರಾವೆಗಳು ಹಾಗೂ ಇತರ ಮಾಹಿತಿಗಳು ಪ್ರಸ್ತುತ ಸಾಕಷ್ಟಿಲ್ಲದಿರುವುದರಿಂದ ಇದರ ಬಗ್ಗೆ ಇನ್ನೂ ತಿಳಿದುಕೊಳ್ಳುವುದಿದೆ. ಇದು ಮಾನವನ ಆರೋಗ್ಯಕ್ಕೆ ಅಪಾಯಕಾರಿಯಾಗಿದ್ದು, ಅಂತಾರಾಷ್ಟ್ರೀಯವಾಗಿ ಹರಡುತ್ತಿದೆ. ಹಾಗೂ ಅಂತಾರಾಷ್ಟ್ರೀಯ ಪ್ರಯಾಣಕ್ಕೂ ಅಡ್ಡಿಪಡಿಸುತ್ತಿದೆ. ಈ ಎಲ್ಲಾ ಕಾರಣಗಳನ್ನು ಗಮನದಲ್ಲಿಟ್ಟುಕೊಂಡು ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಇದನ್ನೂ ಓದಿ: ಅಲ್ಪಸಂಖ್ಯಾತರ ಮೇಲಿನ ದಾಳಿ ವಿರೋಧಿಸಿ ಬಾಂಗ್ಲಾದಲ್ಲಿ ಪ್ರತಿಭಟನೆ
ಮಂಕಿಪಾಕ್ಸ್ ಈಗಾಗಲೇ ಭಾರತಕ್ಕೂ ಲಗ್ಗೆಯಿಟ್ಟಿದ್ದು, ಕೇರಳದಲ್ಲಿ 3 ಕೇಸ್‌ಗಳು ಪತ್ತೆಯಾಗಿವೆ.