ಶಿವಮೊಗ್ಗ: ಮಲೆನಾಡಿಗರನ್ನು ಮಂಗನ ಕಾಯಿಲೆ (Monkeypox) ಬಿಟ್ಟು ಬಿಡದೇ ಕಾಡುತ್ತಿದೆ. 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಕ್ಯಾಸನೂರಿನಲ್ಲಿ ಮೊದಲ ಬಾರಿಗೆ ಈ ಮಂಗನ ಕಾಯಿಲೆ ಕಂಡುಬಂದಿತ್ತು. ಹೀಗಾಗಿಯೇ ಈ ರೋಗಕ್ಕೆ ‘ಕ್ಯಾಸನೂರು ಡಿಸೀಸ್ ಫಾರೆಸ್ಟ್’ (KFD) ಅಂತಾ ಕರೆಯುತ್ತಾರೆ. ಕೆಎಫ್‍ಡಿ ರೋಗಕ್ಕೆ ಇದುವರೆಗೆ ನೂರಾರು ಮಂದಿ ಬಲಿಯಾಗಿದ್ದಾರೆ.
2021ರ ವರ್ಷದಲ್ಲಿಯೂ ಈ ರೋಗಕ್ಕೆ 23 ಮಂದಿ ಬಲಿಯಾಗಿದ್ದರು. 2023ರಲ್ಲಿ ವರ್ಷದ ಮೊದಲ ಕೇಸ್ ಪತ್ತೆಯಾಗಿದ್ದು, ಮತ್ತೆ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಮೊದಲ ಪ್ರಕರಣ ಈ ವರ್ಷದಲ್ಲಿ ಪತ್ತೆಯಾಗಿದ್ದು, ಆರೋಗ್ಯ ಇಲಾಖೆಯೂ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳಲು ಮುಂದಾಗಿದೆ. ಇದನ್ನೂ ಓದಿ: ಮಹಿಳೆ ಅರೆಬೆತ್ತಲೆ ಪ್ರಕರಣ – ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ ನಾಯಕರಿಗೆ ಹೈಕಮಾಂಡ್ ಸೂಚನೆ
Advertisement
Advertisement
ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಶೇಡ್ಗಾರ್ ಬಳಿಯ ಅತ್ತಿಸರ ಗ್ರಾಮದ 53 ವರ್ಷದ ಮಹಿಳೆಯ RTPCR ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಪಾಸಿಟಿವ್ ಕಾಣಿಸಿಕೊಂಡಿರುವ ಮಹಿಳೆಯ ಆರೋಗ್ಯ (Women Health) ಸ್ಥಿರವಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತಿಸರ ಗ್ರಾಮವು ಕಾಡಂಚಿನ ಗ್ರಾಮವಾಗಿದ್ದು ಈ ಹಿಂದೆಯು ಈಭಾಗದಲ್ಲಿ ಕೆಎಫ್‌ಡಿ ಪ್ರಕರಣಗಳು ಪತ್ತೆಯಾದ ಉದಾಹರಣೆಗಳಿವೆ. ಇದನ್ನೂ ಓದಿ: ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್- ಕುಕ್ಕೆಯಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಬಹಿಷ್ಕಾರ
Advertisement
Advertisement
6-7 ದಶಕ ಸಮೀಪಿಸಿದೆ: ಈ ಮಂಗನ ಕಾಯಿಲೆಗೆ ಇದುವರೆಗೆ ಯಾವುದೇ ಲಸಿಕೆ ಇಲ್ಲ. ಕೇವಲ ಬೂಸ್ಟರ್ ಡೋಸ್ ಹಾಗೂ ಮುನ್ನೆಚ್ಚರಿಕೆ ಕ್ರಮಗಳೇ ಇದಕ್ಕೆ ಸೂಕ್ತ ಮದ್ದು. ಈ ಕಾಯಿಲೆ ಪತ್ತೆಯಾಗಿ 6-7 ದಶಕಗಳೇ ಸಮೀಸುತ್ತಿದ್ದರೂ ಇದುವರೆಗೂ ಯಾವುದೇ ಸರ್ಕಾರಗಳು ಆಗಲಿ, ವಿಜ್ಞಾನಿಗಳಾಗಲಿ ಇದಕ್ಕೆ ಲಸಿಕೆ ಕಂಡುಹಿಡಿಯಲು ಮುಂದಾಗಿಲ್ಲ. ಈ ರೋಗ ಸಾಮಾನ್ಯವಾಗಿ ಜನವರಿಯಿಂದ ಜೂನ್‍ವರೆಗೆ ಮಾತ್ರ ಕಾಣಿಸಿಕೊಳ್ಳುತ್ತದೆ. ಈ ಅವಧಿಯಲ್ಲಿ ಸ್ವಲ್ಪ ಮುನ್ನೆಚ್ಚರಿಕೆ ವಹಿಸಿದರೆ ಬಚಾವ್ ಆಗಬಹುದು ಎಂದು ಹೇಳುತ್ತಾರೆ ಆರೋಗ್ಯ ಇಲಾಖೆಯ ಅಧಿಕಾರಿಗಳು.