Karnataka
ಕರಾವಳಿಯಲ್ಲೂ ಮಂಗನ ಕಾಯಿಲೆ ಭೀತಿ – ಮೃತ ಮಂಗಗಳ ಕಳೇಬರ ಪತ್ತೆ

ಉಡುಪಿ: ಶಿವಮೊಗ್ಗ ಜಿಲ್ಲೆಯಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಂಗನ ಕಾಯಿಲೆ ಈಗ ಕರಾವಳಿ ಭಾಗಕ್ಕೂ ಹಬ್ಬಿರುವ ಭೀತಿ ವ್ಯಕ್ತವಾಗಿದ್ದು, ಶಿವಮೊಗ್ಗ ಜಿಲ್ಲೆಗೆ ತಾಗಿಕೊಂಡಿರುವ ಗ್ರಾಮಗಳಲ್ಲಿ ಮೃತ ಮಂಗಗಳ ಶವ ಪತ್ತೆಯಾಗಿದೆ.
ಜಿಲ್ಲೆಯ ಶಿರೂರು ಮೇಲ್ಪಂಕ್ತಿ ಎಂಬಲ್ಲಿ ಎರಡು ಮಂಗಗಳ ಶವ ದೊರೆತಿದೆ. ಸಿದ್ದಾಪುರ ಕಾಡಲ್ಲಿ ಈವರೆಗೆ 9 ಮತ್ತು ಹಳ್ಳಿಹೊಳೆಯಲ್ಲಿ 2 ಮಂಗನ ಕಳೇಬರ ಪತ್ತೆಯಾಗಿದೆ. ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿ ಆರೋಗ್ಯ ಅಧಿಕಾರಿಗಳು ಮೃತ ಕೋತಿಯ ದೇಹದ ಕೆಲವು ಭಾಗಗಳನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಶಿವಮೊಗ್ಗಕ್ಕೆ ಕಳುಹಿಸಿಕೊಟ್ಟಿದ್ದಾರೆ. ಇದನ್ನು ಓದಿ: ಸಾವಿನ ಜ್ವರಕ್ಕೆ ಬೆಚ್ಚಿಬಿದ್ದ ಮಲೆನಾಡು ಮಂದಿ- 7 ಜನರ ಸಾವಿನ ಬಳಿಕ ಎಚ್ಚೆತ್ತ ಸರ್ಕಾರ..!
ಕಿವಿಯಲ್ಲಿ ರಕ್ತಸ್ರಾವವಾಗಿ ಮೃತಪಟ್ಟ ರೀತಿಯಲ್ಲಿ ಕೆಲ ಮಂಗಗಳ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ವರದಿ ಬಳಿಕ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ. ಅಲ್ಲದೇ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತ ಮಂಗಗಳನ್ನು ದಹಿಸಲಾಗಿದೆ.
ಶಿವಮೊಗ್ಗದಲ್ಲಿ ಈಗಾಗಲೇ 7 ಜನರನ್ನು ಬಲಿ ಪಡೆದಿರುವ ಮಂಗನ ಕಾಯಿಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಹಾಗೂ ಆರೋಗ್ಯ ಅಧಿಕಾರಿಗಳು ಶ್ರಮವಹಿಸುತ್ತಿದ್ದಾರೆ. ಇತ್ತ ಕರಾವಳಿ ಭಾಗದಲ್ಲೂ ಮಂಗಗಳು ಅನುಮಾನಸ್ಪದವಾಗಿ ಮೃತ ಪಟ್ಟಿರುವುದು ಸ್ಥಳೀಯರ ಅಂತಕಕ್ಕೆ ಕಾರಣವಾಗಿದೆ. ಇದನ್ನು ಓದಿ:ಏನಿದು ಮಂಗನ ಜ್ವರ? ಕಾಯಿಲೆ ಹೇಗೆ ಬರುತ್ತೆ? ರೋಗ ಲಕ್ಷಣ ಏನು? ಚಿಕಿತ್ಸೆ ಹೇಗೆ- ಇಲ್ಲಿದೆ ಸಂಪೂರ್ಣ ಮಾಹಿತಿ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv
