ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ್ದು, ರಾಜ್ಯಾದ್ಯಾಂತ ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
Advertisement
ಇಂದು ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ವೇದಿಕೆ ಮೇಲೆಯೇ ಕುಸಿದು ಬಿದ್ದ ಕೆಕೆ – ಬಹುಭಾಷಾ ಖ್ಯಾತ ಗಾಯಕ ಹಠಾತ್ ನಿಧನ
Advertisement
Advertisement
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಭಾರೀ ಮಳೆ ಬರಬಹುದು. ಮಳೆ ಜೊತೆಗೆ ಗುಡುಗು, ಸಿಡಿಲು, ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.