– ಜೂನ್ 13ರವರೆಗೆ ಮಹಾ ಮಳೆಯ ಮುನ್ಸೂಚನೆ
ಬೆಂಗಳೂರು: ಕರ್ನಾಟಕದಲ್ಲಿ (Karnataka) ಮುಂಗಾರು ಅಬ್ಬರಿಸುತ್ತಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅತಿಯಾದ ಮಳೆಯಾಗುವ (Heavy Rain) ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದಿನಿಂದ ಜೂನ್ 13ರವರೆಗೆ ಮಹಾ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಗಾಳಿ ಸಮೇತ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಶಾಲಾ ವಾಹನಗಳ ದಿಢೀರ್ ತಪಾಸಣೆ – 7 ಚಾಲಕರ ಡಿಎಲ್ ರದ್ದಿಗೆ ಪೊಲೀಸರಿಂದ ಆರ್‌ಟಿಒಗೆ ಪತ್ರ
ಇನ್ನು ಉಡುಪಿ ಜಿಲ್ಲೆಗೆ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಎರಡು ದಿನಗಳ ಕಾಲ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕಡಲ ಕಡೆಗೆ ಹೋಗಬೇಡಿ ಎಂದು ಎಚ್ಚರಿಕೆ ನೀಡಲಾಗಿದೆ. ನದಿ ಪಾತ್ರದ ಪ್ರದೇಶಗಳಲ್ಲಿ ಕಣ್ಗಾಗವಲಿರಿಸಿದ್ದು, ಈ ಮಳೆಗಾಲದ ಮೊದಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೆರೆ ಉಂಟಾಗುವ ಸಾಧ್ಯತೆಯಿದೆ. ಸದ್ಯಕ್ಕೆ ಜಿಲ್ಲೆಯಾದ್ಯಂತ ತುಂತುರು ಮಳೆಯಾಗುತ್ತಿದೆ. ಇದನ್ನೂ ಓದಿ: ಪರಿಷತ್ ಚುನಾವಣೆ| ಡಿಕೆಶಿ Vs ಹೆಚ್‌ಡಿಕೆ – ಗೆಲ್ಲೋದ್ಯಾರು?
