ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶ ಬೆನ್ನಲ್ಲೇ ಇಂದು ಆನೇಕಲ್ (Anekal Rain) ಸುತ್ತಮುತ್ತ ಜೋರು ಮಳೆ ಸುರಿದಿದೆ.
ಆನೇಕಲ್ ಪಟ್ಟಣ, ಅತ್ತಿಬೆಲೆ, ಸರ್ಜಾಪುರ ಸುತ್ತಮುತ್ತ ಭಾರೀ ಮಳೆಯಾಗಿದೆ. ಕಳೆದ ಮೂರು ದಿನಗಳಿಂದ ಸಂಜೆ ವೇಳೆ ಮಳೆ ಸುರಿಯುತ್ತಿದೆ. ಇಂದು ಸಹ ಆನೇಕಲ್ ಸುತ್ತಮುತ್ತ ಮಳೆ ಮುಂದುವರಿದಿದೆ. ಮಳೆಗೆ ಸಾರ್ವಜನಿಕರು, ವಾಹನ ಸವಾರರು ಹೌರಾಣಾಗಿದ್ದಾರೆ. ಇದನ್ನೂ ಓದಿ: ಅಥಣಿಯಲ್ಲಿ ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್ ಕಟ್ಟಡ – ತಪ್ಪಿದ ಭಾರೀ ಅನಾಹುತ
ಬೆಂಗಳೂರಲ್ಲಿ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇದೆ. ಇಂದು ಬೆಳಗ್ಗೆ ನಗರದಲ್ಲಿ ಬಿಸಿಲು ಕಾಣಿಸಿಕೊಂಡಿತ್ತು. ಮಧ್ಯಾಹ್ನ ಆಗುತ್ತಿದ್ದಂತೆ ಮೋಡಕವಿದ ವಾತಾವರಣ ನಿರ್ಮಾಣವಾಯಿತು.
ಮಧ್ಯಾಹ್ನ ನಗರದ ಹಲವೆಡೆ ಸೋನೆ ಮಳೆಯಾಗಿದೆ. ತಂಪಾದ ವಾತಾವರಣದಿಂದ ಕೂಡಿದ್ದು, ಎರಡು ಬಾರಿ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
