ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ (June) ತಿಂಗಳಿನಲ್ಲಿ ಮೂರನೇ ಬಾರಿಗೆ ಇಂತಹ ಅತ್ಯಂತ ಕೆಟ್ಟ ಪರಿಸ್ಥಿತಿ ದಾಖಲಾಗಿದೆ.
ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಪ್ರಮಾಣದ ಮಳೆಯಾಗಿದ್ದು, ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಕೊರತೆ ಎದ್ದು ಕಾಣುತ್ತಿದೆ. ಇದನ್ನೂ ಓದಿ: ಹಾರ್ಮುಜ್‌ನಲ್ಲಿ ಇರಾನ್ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ಲ್ಯಾನ್ – ಟ್ರ್ಯಾಕಿಂಗ್ ಸಿಸ್ಟಂ ಆಫ್ ಮಾಡಿ ಭಾರತಕ್ಕೆ ಹಡಗುಗಳ ಪ್ರಯಾಣ
ಭಾರತದಲ್ಲಿ (India) ಜೂನ್ ತಿಂಗಳಲ್ಲಿ ವಾಡಿಕೆಯಂತೆ 165 ಮಿಮೀ ಮಳೆಯಾಗಬೇಕಿತ್ತು. ಆದರೆ ಈ ಬಾರಿ `ಎಲ್ ನಿನೋ’ ಪ್ರಭಾವದ ಕಾರಣದಿಂದಾಗಿ ಮಳೆ ಪ್ರಮಾಣದಲ್ಲಿ ಭಾರಿ ಇಳಿಕೆಯಾಗಿದೆ. ಜೂನ್ ಅಂತ್ಯದ ವೇಳೆಗೆ ದೇಶದಲ್ಲಿ ಕೇವಲ 92.1 ಮಿಮೀ ಮಳೆಯಷ್ಟೇ ದಾಖಲಾಗಿದ್ದು, ಶೇಕಡಾ 42ರಷ್ಟು ಮಳೆ ಕೊರತೆ ಉಂಟಾಗಿದೆ.
126 ವರ್ಷಗಳ ಮಳೆ ಇತಿಹಾಸ:
1905ರಲ್ಲಿ: 92.3 ಮಿಮೀ ಮಳೆಯಾಗಿತ್ತು.
2009ರಲ್ಲಿ: 87.5 ಮಿಮೀ ಮಳೆ ದಾಖಲಾಗಿತ್ತು.
2026ರಲ್ಲಿ: 92.1 ಮಿಮೀ ಮಳೆಯಷ್ಟೇ ದಾಖಲಾಗಿದೆ.
ಹವಾಮಾನ ವರದಿಗಳ ಪ್ರಕಾರ, ಜುಲೈ ತಿಂಗಳಿನಲ್ಲೂ ಬಹುತೇಕ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದ್ದು, ರೈತರಲ್ಲಿ ತೀವ್ರ ಆತಂಕ ಮೂಡಿಸಿದೆ. ಇದನ್ನೂ ಓದಿ: ಈ ವರ್ಷ ಮೊದಲ ಬಾರಿಗೆ ತುಂಗಾ ನದಿ ನೀರಿನ ಮಟ್ಟದಲ್ಲಿ ಏರಿಕೆ
