– ಟ್ಯಾಂಕರ್ ಮೂಲಕ ಬೆಳೆಗೆ ನೀರು ಪೂರೈಕೆ
ಬಳ್ಳಾರಿ: ಮುಂಗಾರು ಮಳೆ(Monsoon) ಕೈಕೊಟ್ಟ ಪರಿಣಾಮ ವಿಜಯನಗರ ಜಿಲ್ಲೆಯ(Vijayanagara) ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೂರ್ವ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ಬೆಳೆ ಇದೀಗ ಒಣಗಲಾರಂಭಿಸಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ.
ಮಳೆ ಬರದ ಕಾರಣ ಬೆಳೆ ಒಣಗದಂತೆ ಕಾಪಾಡಲು ರೈತರು ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆ ಕೈತಪ್ಪುವ ಆತಂಕದಲ್ಲಿ ಅನ್ನದಾತರು ದಿನ ಕಳೆಯುತ್ತಿದ್ದಾರೆ.
ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ತಾಲೂಕಿನ ಹಂಪಿನಕಟ್ಟೆ-ವೆಂಕಟಾಪುರ ಗ್ರಾಮದ ರೈತ ಮಹಿಳೆ ಲಕ್ಷ್ಮವ್ವ ತಮ್ಮ ನಾಲ್ಕೂವರೆ ಎಕರೆ ಜಮೀನಿನಲ್ಲಿ ಜೋಳ ಬಿತ್ತನೆ ಮಾಡಿದ್ದರು. ಆದರೆ ಕಳೆದ 20 ದಿನಗಳಿಂದ ಮಳೆಯೇ ಇಲ್ಲದ ಕಾರಣ ಜೋಳದ ಬೆಳೆ ಒಣಗಲು ಆರಂಭಿಸಿದೆ.ಇದನ್ನೂ ಓದಿ: ಗೃಹ ಜ್ಯೋತಿ ಪರಿಶೀಲನೆ ವೇಳೆ ಜಾತಿ ಮಾಹಿತಿ ಕಡ್ಡಾಯವಲ್ಲ: ಬೆಸ್ಕಾಂ
ಬೆಳೆ ಉಳಿಸಿಕೊಳ್ಳಲು ಲಕ್ಷ್ಮವ್ವ ಕುಟುಂಬ ಟ್ಯಾಂಕರ್ ಮೂಲಕ ನೀರು ಹಾಯಿಸುತ್ತಿದೆ. ಈಗಾಗಲೇ 9 ಪ್ಯಾಕೆಟ್ ಜೋಳದ ಬೀಜ ಬಿತ್ತನೆ ಮಾಡಿ ಸುಮಾರು ₹40 ಸಾವಿರ ಖರ್ಚು ಮಾಡಿದ್ದೇವೆ. ಮಳೆ ಬರದ ಕಾರಣ ಬೆಳೆ ಒಣಗುತ್ತಿದೆ. ಈಗ ಬೆಳೆ ಉಳಿಸಿಕೊಳ್ಳಲು ಮತ್ತೆ ಸಾವಿರಾರು ರೂಪಾಯಿ ಖರ್ಚು ಮಾಡಿ ಟ್ಯಾಂಕರ್ ನೀರು ತರಿಸುತ್ತಿದ್ದೇವೆ ಎಂದು ರೈತ ಮಹಿಳೆ ನೋವು ವ್ಯಕ್ತಪಡಿಸಿದ್ದಾರೆ.
ಮುಂಗಾರು ಮಳೆ ಮತ್ತಷ್ಟು ವಿಳಂಬವಾದರೆ ಬೆಳೆ ಸಂಪೂರ್ಣ ನಾಶವಾಗುವ ಭೀತಿ ಎದುರಾಗಿದ್ದು, ರೈತರು ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ.ಇದನ್ನೂ ಓದಿ: ಮನೆಗೆ ನುಗ್ಗಿ ಯುವತಿಗೆ ಚಾಕು ಇರಿತ – ಮೂವರು ಅರೆಸ್ಟ್, ಪ್ರಮುಖ ಆರೋಪಿಗಳಿಗಾಗಿ ಶೋಧ

