ಬೆಂಗಳೂರು: ರಾಜ್ಯದಲ್ಲಿ ಮಳೆ ಕೈಕೊಟ್ಟ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಬೇಸಿಗೆಯಂತಹ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಎಲ್ ನಿನೋ ಎಫೆಕ್ಸ್‌ನಿಂದ ಮಳೆ ಅಭಾವ ಉಂಟಾಗಿದ್ದು, ಇತ್ತ ತಾಪಮಾನ ಏರಿಕೆಯಾಗುತ್ತಿದೆ. ಕಲಬುರಗಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇನ್ನೂ ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇದನ್ನೂ ಓದಿ: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ – 8 ವಿಮಾನ ನಿಲ್ದಾಣಗಳು ಬಂದ್, 1,70,000ಕ್ಕೂ ಹೆಚ್ಚು ಪ್ರಯಾಣಿಕರ ಪರದಾಟ

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 4 ರಿಂದ 5 ಡಿಗ್ರಿ ತಾಪಮಾನ ಏರಿಕೆಯಾಗಲಿದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ದಾಖಲಾಗುವಂತಹ ಬಿಸಿಲು ಇದೀಗ ಮುಂಗಾರು ಸಮಯದಲ್ಲಿ ದಾಖಲಾಗಲಿದೆ.
ಮುಂದಿನ ಒಂದು ವಾರ ಬೆಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್‌ಗೆ ತಾಪಮಾನ ಏರಿಕೆ ಆಗಲಿದೆ. ಜೊತೆಗೆ ಕಲಬುರಗಿಯಲ್ಲಿ 36 ರಿಂದ 37ವರೆಗೆ ಏರಿಕೆ ಆಗಲಿದೆ. ಮಳೆ, ಮೋಡ ಹಾಗೂ ಭೂಮಿಯ ತೇವಾಂಶ ಕಡಿಮೆಯಾದ ಹಿನ್ನೆಲೆ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ತಜ್ಞ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಪಿಒಪಿ ಗಣೇಶನ ರೈಡ್ ಬೆನ್ನಲ್ಲೇ ಪಟಾಕಿ ಬಳಕೆಗೂ ಸರ್ಕಾರ ಹೊಸ ರೂಲ್ಸ್
