ಬೆಂಗಳೂರು: ರಾಜ್ಯಕ್ಕೆ ಮುಂಗಾರು ಎಂಟ್ರಿಯಾಗಿದ್ದು, ಹಲವೆಡೆ ಮಳೆಯಾಗುತ್ತಿದೆ. ಆರಂಭದಲ್ಲೇ ವರುಣ ಅಬ್ಬರಿಸಿದ್ದು, ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಮುಂದಿನ 6 ದಿನ ರಾಜ್ಯದಲ್ಲಿ ಮಳೆ ಅಬ್ಬರಿಸುವ ಮುನ್ಸೂಚನೆಯಿದ್ದು, ಜೂನ್ 13ರವರೆಗೆ ಹವಾಮಾನ ಇಲಾಖೆ (IMD) ಹಲವೆಡೆ ರೆಡ್ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಜೂನ್ 13ರವರೆಗೆ ಬಿರುಗಾಳಿ ಸಮೇತ ಮಳೆಯಾಗಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮುಂಗಾರು ಆರ್ಭಟ – 6 ದಿನ ಹಲವೆಡೆ ರೆಡ್ ಅಲರ್ಟ್
ಬೆಳಗಾವಿ:
ಬೆಳಗಾವಿಯ (Belagavi) ವಿವಿಧ ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗಿದೆ. ಸವದತ್ತಿ ಹಾಗೂ ಬೈಲಹೊಂಗಲ ಪಟ್ಟಣಗಳಲ್ಲಿ ರಸ್ತೆಯಲ್ಲಿ ಮೊಳಕಾಲುದ್ದ ನೀರು ಹರಿದು ಅವಾಂತರ ಸೃಷ್ಟಿಯಾಗಿದೆ. ಮನೆಗೆ ತೆರಳಲಾಗದೇ ವಾಹನ ಸವಾರರು ಪರದಾಡಿದ್ದಾರೆ. ಮಳೆ ನೀರು ಹರಿಯುವ ರಭಸಕ್ಕೆ ಬೈಕ್‌ಗಳು ತೇಲುತ್ತಿವೆ. ಅಲ್ಲದೇ ಬೈಲಹೊಂಗಲದ ಮಾರ್ಕೆಟ್‌ಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಪ್ರತಿ ಬಾರಿ ಮಳೆಯಾದಾಗಲೂ ಮನೆಗೆ ಮಳೆ ನೀರು ನುಗ್ಗುತ್ತೆ ಎಂದು ಯುವಕ ಹರಿಯುವ ನೀರಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದ್ದಾನೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಕಾಲೋನಿ ಜನರು ನಗರಸಭೆ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜೆ ಸುರಿದ ಮಳೆ ನೀರು ಕೂಡ ಮನೆಗೆ ನುಗ್ಗಿದ್ದು, ಈಶ್ವರ ಶಿಲ್ಲೇದಾರ್ ಎಂಬಾತ ಹರಿಯುತ್ತಿದ್ದ ನೀರಲ್ಲಿ ವಿದ್ಯುತ್ ಕಂಬ ಹಿಡಿದು ಕುಳಿತು ಪ್ರತಿಭಟನೆ ನಡೆಸಿದ್ದಾನೆ.
ರಾಯಚೂರು:
ಜಿಲ್ಲೆಯ ಹಲವೆಡೆ ಸುರಿದ ಮಳೆಯಿಂದ ಕೆಲವೆಡೆ ಅವಾಂತರ ಸೃಷ್ಟಿಯಾಗಿವೆ. ದೇವದುರ್ಗ (Devadurga) ತಾಲೂಕಿನ ಗಬ್ಬೂರಿನಲ್ಲಿ ಮಳೆ ನೀರಿನ ಜೊತೆ ಚರಂಡಿ ನೀರು ಸಹ ಮನೆಗೆ ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಸೂರ್ಯ ಪ್ರಕಾಶ್, ಸಿದ್ದನಗೌಡ ಎಂಬುವವರ ಮನೆಗೆ ನೀರು ನುಗ್ಗಿ ಕುಟುಂಬಸ್ಥರು ರಾತ್ರಿಯೆಲ್ಲ ಪರದಾಡಿದ್ದಾರೆ.ಇದನ್ನೂ ಓದಿ: ಇಂದಿನಿಂದ ಖಾಸಗಿ ಬಸ್ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆಯ ಬಿಸಿ
ಉತ್ತರ ಕನ್ನಡ:
ಉತ್ತರ ಕನ್ನಡ (Uttara Kannada) ಜಿಲ್ಲೆಯ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಯಲ್ಲಿ ಕೊಳಚೆ ನೀರು ತುಂಬಿ ಭಕ್ತರು ಪೂಜೆ ಸಲ್ಲಿಸದ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಮಳೆ ಮುಂದುವರಿದ್ರೆ ಪರಿಸ್ಥಿತಿ ಮತ್ತಷ್ಟು ಸಂಕಷ್ಟಕ್ಕೆ ದೂಡುವಂತಿದೆ.
ಉಡುಪಿ:
ಉಡುಪಿ (Udupi) ಜಿಲ್ಲೆಯಲ್ಲಿ ಕೊನೆಗೂ ಮುಂಗಾರು ಚುರುಕು ಪಡೆದುಕೊಂಡ ಲಕ್ಷಣಗಳು ಕಾಣಿಸುತ್ತಿವೆ. ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.ಇದನ್ನೂ ಓದಿ: ಬಾರ್, ಕ್ಲಬ್‌ಗಳಲ್ಲಿ ಅಪ್ರಾಪ್ತರಿಗೆ ವಯಸ್ಸಿನ ಐಡಿ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ
ಮಂಗಳೂರು:
ಇನ್ನೂ ಮುಂಗಾರು ಆಗಮನ ಹಿನ್ನೆಲೆ ಮಂಗಳೂರಿನಲ್ಲಿ (Mangaluru) ಸಚಿವ ಯು.ಟಿ ಖಾದರ್ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆ ನಡೆಸಿದ್ದಾರೆ. ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ ಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆಯಾಗುತ್ತಾರೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮಳೆಗಾಲದ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸಚಿವ ಸೂಚಿಸಿದ್ದಾರೆ.
ಇನ್ನು ಮಲೆನಾಡಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಜೂ.10, 11 ರೆಡ್ ಅಲರ್ಟ್ ಘೋಷಿಸಲಾಗಿದೆ. ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದಿರುವಂತೆ ಚಿಕ್ಕಮಗಳೂರಿನ (Chikkamagaluru) ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಒಟ್ಟಾರೆ ರಾಜ್ಯದಲ್ಲಿ ಮುಂಗಾರು ಮಳೆಗೆ ಜಿಲ್ಲೆಗಳಲ್ಲಿ ಮುಂಜಾಗ್ರತ ಕ್ರಮಕೈಗೊಳ್ಳದ ಕಾರಣ ಜನ ಸಂಕಷ್ಟ ಅನುಭವಿಸುವಂತಾಗಿದೆ.ಇದನ್ನೂ ಓದಿ: 3,991 ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ – ಜೂ.10ರಿಂದ ಅರ್ಜಿ ಸಲ್ಲಿಕೆ ಆರಂಭ: ಕೆಇಎ
