ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಈ ನಡುವೆ ಮುಂದಿನ ಐದು ದಿನ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಲಾಖೆ ಮಾಹಿತಿ ಪ್ರಕಾರ, ಬೆಂಗಳೂರು (Bengaluru) ಸೇರಿ ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಳಗಾವಿ, ರಾಯಚೂರು, ಕಲ್ಬುರ್ಗಿ, ಕೊಪ್ಪಳ, ಹುಬ್ಬಳ್ಳಿ ಧಾರವಡ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂಗಾರು ಅಬ್ಬರ – ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ
ಸದ್ಯ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ.
