ಬೆಂಗಳೂರು: ರಾಜ್ಯದಲ್ಲಿ (Karnataka) ಮುಂಗಾರು ಅಬ್ಬರ ಜೋರಾಗಿದ್ದು, ಮುಂದಿನ ನಾಲ್ಕು ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.
ಬೆಂಗಳೂರಲ್ಲಿ ಇನ್ನೂ ಎರಡು ದಿನ ಮೋಡ ಕವಿದ ವಾತಾವರಣದ ಜೊತೆ ತುಂತುರು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಹೀಗಾಗಿ ಮಳೆಯ ಜೊತೆ ಚುಮುಚುಮು ಚಳಿಯ ಅನುಭವ ಇರಲಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಮಾನಸಿಕ ಸ್ಥಿತಿ ಕುಗ್ಗಿತಾ?- ಅತ್ಯಾಚಾರ ಕೇಸ್ ಅಪರಾಧಿಗೆ ಜೈಲಿನಲ್ಲೇ ಕೌನ್ಸಿಲಿಂಗ್
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಬೆಳಗಾವಿ, ವಿಜಯಪುರ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: 2.5 ಲಕ್ಷಕ್ಕೆ ನವಜಾತ ಶಿಶುವನ್ನೇ ಮಾರಿದ ತಾಯಿ – ಹಣ ಖರ್ಚಾದ ಬಳಿಕ ಮಗು ವಾಪಸ್ಸಿಗಾಗಿ ದೂರು