ಬೆಂಗಳೂರು: ಕರ್ನಾಟಕದಲ್ಲಿ (Karnataka) ಮುಂಗಾರು (Monsoon) ಮತ್ತೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪನೆ, ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ: ಮೋದಿ
ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ದಾವಣಗೆರೆ, ಮೈಸೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ – ಆರೋಪಿ ಪುಣ್ಯೇಶ್ ಬಂಧನ
