– ಹಿಮಾಚಲಪ್ರದೇಶದಲ್ಲಿ ಅಲ್ಲೋಲ ಕಲ್ಲೋಲ
ನವದೆಹಲಿ: ಉತ್ತರ ಭಾರತದಲ್ಲಿರುವ (North India) ಹಿಮಾಚಲಪ್ರದೇಶ, ಉತ್ತರಾಖಂಡ್, ಜಮ್ಮುಕಾಶ್ಮೀರ, ಪಂಜಾಬ್, ಹರ್ಯಾಣ ರಾಜ್ಯಗಳು ಕುಂಭದ್ರೋಣ ಮಳೆಗೆ (Heavy Rainfall) ತತ್ತರಿಸಿವೆ. ಎರಡು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಗೆ ಕನಿಷ್ಠ 19 ಮಂದಿ ಬಲಿಯಾಗಿದ್ದಾರೆ.
Advertisement
#Beas River today created History by touching the 1877 Built #Victoria bridge ????????
Several Bridges in #Mandi district surrendered today in front of Beas
9th July 2023 = A Date to Remember#HimachalPradesh pic.twitter.com/Y7OebGtgcr
— Weatherman Shubham (@shubhamtorres09) July 9, 2023
Advertisement
ಇಂದೂ ದೆಹಲಿ, ಹರ್ಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರವಾಹ, ಭೂಕುಸಿತ ಸಾಮಾನ್ಯ ಎಂಬಂತಾಗಿದ್ದು ಹಿಮಾಚಲದಲ್ಲಂತೂ (Himachal Pradesh) ಅಲ್ಲೋಲಕಲ್ಲೋಲವಾಗಿದೆ. ನದಿಗಳೆಲ್ಲಾ ಅಪಾಯದ ಮಟ್ಟ ಮೀರಿದ್ದು, ಸಿಕ್ಕಿದ್ದನ್ನೆಲ್ಲಾ ಆಪೋಷನ ಪಡೆಯುತ್ತಿವೆ.
Advertisement
Chamera Dam
9th July 2023
Chamba , Himachal Pradesh pic.twitter.com/fCZ8NrNTjY
— Weatherman Shubham (@shubhamtorres09) July 9, 2023
Advertisement
ಬೀಯಾಸ್ ನದಿ (Beas River) ರಣಾರ್ಭಟಕ್ಕೆ ಕಟ್ಟಡವೊಂದು ಕುಸಿದಿದೆ. ಕುಲು ಬಳಿ ಕಾರುಗಳು ಕೊಚ್ಚಿ ಹೋಗಿದ್ದು, ಶಿಮ್ಲಾದ ಡಿಂಗು ಮಾತೆಯ ಮಂದಿರದ ರಸ್ತೆ ನೋಡನೋಡುತ್ತಲೇ ಕುಸಿದುಬಿದ್ದಿದೆ. ಅಟಲ್ ಸುರಂಗದ (Atal Tunnel) ಬಳಿಯೇ ಗುಡ್ಡ ಕುಸಿತವಾಗಿದ್ದು ಕುಲು-ಮನಾಲಿ ನಡುವಿನ ರಸ್ತೆ ಬಂದ್ ಆಗಿದೆ. ಇದನ್ನೂ ಓದಿ: ಅಮರನಾಥ ಯಾತ್ರೆ ಕೈಗೊಂಡಿದ್ದ ಮಾಗಡಿಯ 5 ಮಂದಿ ಸೇಫ್
Now it’s Pathetic Situation in Himachal pic.twitter.com/r1muSfeDdk
— Go Himachal (@GoHimachal_) July 9, 2023
ಪಂಧೋ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರನ್ನು ನೀರು ಹೊರಗೆ ಬಿಡಲಾಗಿದ್ದು, ಸಣ್ಣ ಸೇತುವೆಯೊಂದು ಮಾಯವಾಗಿದೆ. ಪಂಚವಕ್ತ್ರ ಎಂಬಲ್ಲಿ ಮರದ ದಿಮ್ಮಿಗಳ ಸಮೇತ ಜಲರಕ್ಕಸ ನಗರಕ್ಕೆ ನುಗ್ಗಿದೆ. ನಿರಂತರ ಗುಡ್ಡ ಕುಸಿತದ ಪರಿಣಾಮ ಮಾರ್ಗಮಧ್ಯೆಯೇ ಸಾವಿರಾರು ವಾಹನ ಸಿಲುಕಿವೆ.
Now i lost the count , Beas River inhales several bridges today
So Heartbreaking to see ????????
Kun ka Tar Bridge connecting Kotli with Jogindernagar collapsed#HimachalPradesh pic.twitter.com/ng7iFmR2aS
— Weatherman Shubham (@shubhamtorres09) July 9, 2023
ಊಟ ನೀರಿಲ್ಲದೇ ಪ್ರವಾಸಿಗರು ಒದ್ದಾಡುವಂತಾಗಿದೆ. ಪ್ರವಾಹ, ಭೂಕುಸಿತದ ಪರಿಣಾಮ 700ಕ್ಕೂ ಹೆಚ್ಚು ರಸ್ತೆಗಳು ಬಂದ್ ಆಗಿವೆ. ಹಿಮಾಚಲದಲ್ಲಿ ರೆಡ್ ಅಲರ್ಟ್ ಪ್ರಕಟಿಸಲಾಗಿದ್ದು, 2 ದಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Roaring Yamuna at Paonta Sahib
9th July 2023
Sirmaur , Himachal Pradesh pic.twitter.com/aQ42JdVXeO
— Weatherman Shubham (@shubhamtorres09) July 9, 2023
ಉತ್ತರಾಖಂಡ್‍ನ (Uttarakhand) ಉಧಾಂಸಿಂಗ್‍ನಗರದಲ್ಲಿ ಮನೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ತೆಹ್ರಿಯಲ್ಲಿ ದಕ್ಷಿಣ ಭಾರತೀಯರಿದ್ದ ಪ್ರವಾಸಿ ವಾಹನವೊಂದು ಅಪಘಾತಕ್ಕೀಡಾಗಿದೆ. 11 ಮಂದಿ ಪೈಕಿ ಐವರನ್ನು ರಕ್ಷಣೆ ಆಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ನಡೆದಿದೆ.
VIDEO | Rescue work underway at Gulmohar society in Dera Bassi, Mohali after severe waterlogging in the premises due to incessant rainfall. pic.twitter.com/iD1KHaBwgS
— Press Trust of India (@PTI_News) July 9, 2023
ಜಮ್ಮು ಕಾಶ್ಮೀರದ (Jammu Kashmir) ಪೋಶನಾ ನದಿಯಲ್ಲಿ ಇಬ್ಬರು ಯೋಧರು ಕೊಚ್ಚಿಕೊಂಡು ಹೋಗಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ 44 ಹಲವೆಡೆ ಸಮಸ್ಯೆಯಾಗಿದೆ. ಪಂಜಾಬ್‍ನ ಮೊಹಾಲಿ ಜಲಾವೃತವಾಗಿದ್ದು, ಅಪಾರ್ಟ್‍ಮೆಂಟ್‍ಗಳು ಜಲದಿಗ್ಬಂಧನದಲ್ಲಿವೆ. ಬೋಟ್‍ಗಳ ಮೂಲಕ ಜನರನ್ನ ರಕ್ಷಿಸಲಾಗುತ್ತಿದೆ.
Web Stories