ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಳೆಗೆ ಬೇಕಾದ ಗಾಳಿ ದುರ್ಬಲವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಉಸ್ತುವಾರಿ ಕೇಂದ್ರದ ವಿಜ್ಞಾನಿ ಗವಾಸ್ಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತವರಣವಿದ್ದು, ಕರವಾಳಿ ಪ್ರದೇಶ, ದಕ್ಷಿಣ ಓಳನಾಡು ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಿದೆ ಎಂದು ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದರು.
Advertisement
ಜೂನ್‍ನಲ್ಲಿ ವಾಡಿಕೆಗಿಂತ ಮಳೆಯ ಪ್ರಮಾಣ ಹೆಚ್ಚಾಗಿದೆ. ವಾಡಿಕೆಯಂತೆ 110 ಮಿ.ಮೀ ಮಳೆಯಾಗಬೇಕಿತ್ತು. ಅದ್ರೆ ಈಗಾಗಲೇ 116 ಮಿ.ಮೀ ಮಳೆಯಾಗಿದೆ ಎಂದು ಗವಾಸ್ಕರ್ ತಿಳಿಸಿದರು.