ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿದೆ. ಮಳೆಯಿಂದಾಗಿ ಜು.8 ರಂದು ಶಾಲಾ ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
ಬೆಳಗಾವಿ ತಾಲೂಕು, ಖಾನಾಪುರ ತಾಲೂಕು ಸೇರಿದಂತೆ ನಿಪ್ಪಾಣಿ ತಾಲೂಕಿನ ಶಾಲಾ ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ 4 ತಾಲೂಕು ವ್ಯಾಪ್ತಿಯಲ್ಲಿ ರಜೆ ಘೋಷಿಸಲಾಗಿದೆ. ಸೊರಬ ತಾಲೂಕಿನಲ್ಲಿ ಅಂಗನವಾಡಿ ಕೇಂದ್ರ, ಪ್ರಾಥಮಿಕ & ಪ್ರೌಢಶಾಲೆಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿಯಲ್ಲಿ ಶಾಲಾ- ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
